ಸಿದ್ದಾಪುರ ಡಿ. ೨೩ ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪಾಲಿಬೆಟ್ಟದ ಹೊಸಹಳ್ಳಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನಾದ ಕುಮಾರ್ ಎಂಬವರ ಮಗ ಆಟೋ ಚಾಲಕ ಸುಮಂತ್ (೨೩) ಎಂಬಾತ ಮಂಗಳವಾರ ಮಧ್ಯಾಹ್ನ ೧೨ ಗಂಟೆ ಸಮಯಕ್ಕೆ ತೋಟದ ಲೈನ್ ಮನೆಯ ಸ್ನಾನದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳಲು ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಮೃತ ಯುವಕನ ತಂದೆ ಕುಮಾರ ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.