ಮಡಿಕೇರಿ, ಡಿ. ೨೩: ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ತಕ್ಷಣವೇ ಚಿಕಿತ್ಸೆ ನೀಡಿ ಬಿ.ಪಿ.ಎಲ್ ಅಥವಾ ಎ.ಪಿ.ಎಲ್ ಎಂದು ನಂತರ ಮಾಹಿತಿ ಪಡೆದು ಬಿಲ್ ಬಗ್ಗೆ ನಿರ್ಧರಿಸಿ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗ¼ À (ಕೊಡಗು ಜಿಲ್ಲಾಸ್ಪತ್ರೆ) ನಿರ್ದೇಶಕರಿಗೆ ಮುಖ್ಯಮಂತ್ರಿ ಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಸೂಚನೆ ನೀಡಿದರು. ಆಕಸ್ಮಿಕ ಪಟಾಕಿ ಸಿಡಿತದಿಂದ ಬೆರಳು ಕಳೆದುಕೊಂಡು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿರುವ ಗೋಣಿಕೊಪ್ಪದ ಶಾಲಾ ಬಾಲಕ ಪವನ್ ಆರೋಗ್ಯ ವಿಚಾರಿಸಲು ಪೊನ್ನಣ್ಣ ಅವರು ಆಸ್ಪತ್ರೆಗೆ ಬಂದಾಗ ಪರಿಶಿಷ್ಟ ಪಂಗಡದ ಬಡ ಕುಟುಂಬದ ಪವನ್ನನ್ನು ಆಸ್ಪತ್ರೆಗೆ ದಾಖಲಿಸುವ ಸಂದÀರ್ಭದಲ್ಲಿ ದಾಖಲಾತಿ ಇಲ್ಲದೆ ಇದ್ದುದರಿಂದ ಎ.ಪಿ.ಎಲ್. ಎಂದು ನಿರ್ಧರಿಸಿ ಬಿಲ್ ಕಟ್ಟಿಸಲಾಗಿತ್ತು. ನಂತರ ಶಾಲಾ ದಾಖಲಾತಿಯನ್ನು ಸಲ್ಲಿಸಲಾಗಿತ್ತು ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ಅವರು ಶಾಸಕರ ಗಮನಕ್ಕೆ ತಂದರು.
ತುರ್ತು ಸಂದರ್ಭದಲ್ಲಿ ಬಡ ರೋಗಿಗಳು ಹಣವಿಲ್ಲದೆ ದಾಖಲೆಗಳನ್ನು ಜೊತೆಯಲ್ಲಿ ತರದೇ ಇದ್ದರೆ ಚಿಕಿತ್ಸೆ ಪಡೆಯಲು ವಿಳಂಬವಾಗಿ ಅನಾಹುತ ಸಂಭವಿಸುವ ಸಾಧ್ಯತೆ ಇದೆ.ಹಾಗಾಗಿ ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿ ಎಚ್ಚರಿಕೆಯಿಂದ ಕೆಲಸ ಮಾಡುವಂತೆ ಸೂಚನೆ ನೀಡಿದರು. ಆಸ್ಪತ್ರೆಯ ಶುಚಿತ್ವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕರು ಚಿಕಿತ್ಸೆಯಲ್ಲಿಯೂ ಗುಣಮಟ್ಟ ಇರಬೇಕು ಎಂದು ವೈದ್ಯರಿಗೆ ಕಿವಿ ಮಾತು ಹೇಳಿದರು. ಶಾಸಕರು ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವೈದ್ಯಕೀಯ ಕಾಲೇಜು ಡೀನ್ ಡಾ ಲೋಕೇಶ್ ಕುಮಾರ್, ಆರ್.ಎಂ. ಡಾ ಅಭಿನಂದನ್ ಮುಖಂಡರಾದ ತೆನ್ನಿರ ಮೈನಾ, ಅಪ್ರು ರವೀಂದ್ರ, ಸೂರಜ್ ಹೊಸೂರು ,ಪ್ರಭುರೈ ,ಪಿ.ಎಲ್. ಸುರೇಶ್, ಹನಿಫ್ ಸಂಪಾಜೆ, ವಿಕಾಶ್, ಸೇರಿದಂತೆ ಇತರರು ಹಾಜರಿದ್ದರು.