ಸೋಮವಾರಪೇಟೆ, ಡಿ. ೨೩: ಇಲ್ಲಿನ ಇಂದಿರಾಗಾAಧಿ ಅಭಿಮಾನಿಗಳ ಬಳಗದ ವತಿಯಿಂದ ೩೯ನೇ ವರ್ಷದ ರಾಜ್ಯಮಟ್ಟದ ಬೆಳ್ಳಿ ಬಟ್ಟಲಿನ ಕಬಡ್ಡಿ ಪಂದ್ಯಾವಳಿ ಜ.೨೪ರಂದು ಪಟ್ಟಣದ ಸಾಕಮ್ಮನ ಬಂಗಲೆ ಮುಂಭಾಗದ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಹೆಚ್.ಎ. ನಾಗರಾಜು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘವು ಸ್ಥಾಪನೆಯಾಗಿ ೪೧ ವರ್ಷಗಳಾಗಿದ್ದು, ಕಳೆದ ೩೮ ವರ್ಷಗಳಿಂದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಯಶಸ್ವಿಂiÀi

Áಗಿ ನಡೆಸಲಾಗಿದೆ. ಈ ಬಾರಿ ೩೯ನೇ ವರ್ಷದ ಪಂದ್ಯಾಟ ಆಯೋಜಿಸಲಾಗಿದೆ ಎಂದರು.

ಗ್ರಾಮೀಣ ಕ್ರೀಡೆಯಾದ ಕಬಡ್ಡಿಗೆ ಪ್ರೋತ್ಸಾಹ ನೀಡುವುದು ಹಾಗೂ ಆಟಗಾರರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ನಿರಂತರವಾಗಿ ಪಂದ್ಯಾಟ ಆಯೋಜಿಸಿಕೊಂಡು ಬರಲಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ವಿಭಾಗ, ೨೦ ವರ್ಷ ವಯೋಮಾನದೊಳಗಿನ ಯುವಕರು ಮತ್ತು ಸಾರ್ವಜನಿಕ ವಿಭಾಗದಲ್ಲಿ ಪಂದ್ಯಾವಳಿ ನಡೆಯಲಿದೆ. ಸಾರ್ವಜನಿಕ ವಿಭಾಗದಲ್ಲಿ ನಡೆಯುವ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ವಿಜೇತರಾಗುವ ತಂಡಕ್ಕೆ ಪ್ರಥಮ ಬಹುಮಾನವಾಗಿ ಆಕರ್ಷಕ ಟ್ರೋಫಿ ಹಾಗೂ ರೂ. ೧೫ ಸಾವಿರ ನಗದು, ದ್ವಿತೀಯ ಬಹುಮಾನವಾಗಿ ರೂ. ೮ ಸಾವಿರ ನಗದು ಹಾಗೂ ಟ್ರೋಫಿ, ತೃತೀಯ ರೂ. ೫ ಸಾವಿರ ನಗದು ಹಾಗೂ ಟ್ರೋಫಿ ನೀಡಲಾಗುವುದು. ಜಿಲ್ಲಾ ಮಟ್ಟದ ಪಂದ್ಯಾಟ ವಿಜೇತ ತಂಡಗಳಿಗೂ ಬಹುಮಾನ ನೀಡಲಾಗುವುದು ಎಂದು ಮಾಹಿತಿಯಿತ್ತರು. ಪಂದ್ಯಾಟದ ಬಗೆಗಿನ ಹೆಚ್ಚಿನ ಮಾಹಿತಿಗಾಗಿ ಮೊ: ೯೪೮೩೮೪೩೩೯೫, ೮೬೧೮೧೨೭೮೫೩,೯೪೪೯೭೯೧೭೯೧ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದರು. ಗೋಷ್ಠಿಯಲ್ಲಿ ಸಂಘದ ಸಂಚಾಲಕ ಅಜಯ್, ಗೌರವ ಕಾರ್ಯದರ್ಶಿ ಜಗದೀಶ್, ಪದಾಧಿಕಾರಿಗಳಾದ ಮಲ್ಲೇಶ್, ರಾಜು ಅವರುಗಳು ಉಪಸ್ಥಿತರಿದ್ದರು.