ಮಡಿಕೇರಿ, ಡಿ. ೨೪: ಜಿಲ್ಲೆಯಲ್ಲಿ ಕಾಫಿ ಹಾಗೂ ಕಾಳುಮೆಣಸು ಫಸಲು ಕಳ್ಳತನ ತಡೆಯುವ ನಿಟ್ಟಿನಲ್ಲಿ ಖರೀದಿ ಸಂದರ್ಭ ವ್ಯಾಪಾರಿಗಳು ಮಾರಾಟಗಾರರ ಅಗತ್ಯ ಮಾಹಿತಿಗಳನ್ನು ಪಡೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಎಚ್ಚರಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಇದೀಗ ಕಾಫಿ ಮತ್ತು ಕಾಳು ಮೆಣಸು ಫಸಲನ್ನು ಕೊಯ್ಲು ಮಾಡುವ ಸಮಯವಾಗಿದ್ದು, ಕೊಯ್ಲು ಮಾಡಿರುವ ಕಾಫಿ ಮತ್ತು ಕಾಳು ಮೆಣಸನ್ನು ಸಂಗ್ರಹ ಮಾಡಿರುವ ಸ್ಥಳಗಳಿಂದ ಕಳವು ಮಾಡಿರುವ ಕುರಿತು ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಕಾಫಿ ಮತ್ತು ಕಾಳು ಮೆಣಸು ವ್ಯಾಪರಸ್ಥರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸುವAತೆ ಸ್ಥಳೀಯ ಪೊಲೀಸ್ ಠಾಣಾಧಿಕಾರಿಗಳಿಗೆ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ.

ಜಿಲ್ಲೆಯಲ್ಲಿನ ಕಾಫಿ ಮತ್ತು ಕಾಳು ಮೆಣಸು ವ್ಯಾಪಾರಸ್ಥರು ಫಸಲನ್ನು ಖರೀದಿ ಮಾಡುವ ಸಂದರ್ಭದಲ್ಲಿ ಮಾರಾಟ ಮಾಡುವವರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ವಹಿವಾಟಿನ ವಿವರ ತೂಕ ಮತ್ತು ಮೊತ್ತ ಸೇರಿದಂತೆ ೫ನೇ ಪುಟಕ್ಕೆ

(ಮೊದಲ ಪುಟದಿಂದ) ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಖರೀದಿ ಸಂದರ್ಭ ಮಾರಾಟಗಾರರ ಬಗ್ಗೆ ಅನುಮಾನ ಬಂದಲ್ಲಿ ಅಂತಹ ವ್ಯಕ್ತಿಗಳ ಭಾವಚಿತ್ರವನ್ನು ಪಡೆಯಬೇಕು ಹಾಗೂ ಅವರ ಹಿನ್ನೆಲೆ ಪರಿಶೀಲಿಸಿ ಎಚ್ಚರಿಕೆಯಿಂದ ವ್ಯವಹರಿಸಬೇಕೆಂದು ಸೂಚಿಸಿದ್ದಾರೆ.

ವ್ಯವಹಾರದ ಸಂದರ್ಭ ಯಾವುದೇ ರೀತಿಯ ಅನುಮಾನ ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಒಂದು ವೇಳೆ ಸೂಚಿಸಿರುವ ವಿವರಗಳ ದಾಖಲಾತಿಗಳನ್ನು ನಿರ್ವಹಿಸದಿರುವುದು ಪರಿಶೀಲನೆ ವೇಳೆ ಕಂಡುಬAದಲ್ಲಿ ಅಂತಹವರ ವಿರುದ್ಧ ಜಿಎಸ್‌ಟಿ ಇಲಾಖೆಗೆ ಮಾಹಿತಿ ನೀಡಲಾಗುವುದು ಹಾಗೂ ಯಾವುದೇ ದಾಖಲಾತಿ ನಿರ್ವಹಿಸದೇ ವ್ಯವಹರಿಸಿರುವುದನ್ನು ಉದ್ದೇಶಪೂರ್ವಕವಾಗಿ ಕಳವು ಮಾಲನ್ನು ಕಡಿಮೆ ಬೆಲೆಯಲ್ಲಿ ಪಡೆದಿರುವುದಾಗಿ ಪರಿಗಣಿಸಿ ವ್ಯಾಪರಸ್ಥರ ವಿರುದ್ಧ ಸೆಕ್ಷನ್ ೩೧೭ (೨) ಮತ್ತು (೪) ರಡಿ ಪ್ರಕರಣ ದಾಖಲಿಸಲಾಗುತ್ತದೆ. ಈ ಅಪರಾಧಕ್ಕೆ ೩ ರಿಂದ ೧೦ ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ಸಾಧ್ಯತೆಗಳಿವೆ ಎಂದು ಎಚ್ಚರಿಸಿದ್ದಾರೆ.

ಕಾಫಿ ಮತ್ತು ಕಾಳು ಮೆಣಸು ಬೆಳೆಗಾರರು ವ್ಯಾಪರ ನಡೆಸುವ ಸಂದರ್ಭ ಸಂಶಯ ಬಂದಲ್ಲಿ ತುರ್ತು ಸಹಾಯವಾಣಿ ೧೧೨ಕ್ಕೆ ಕರೆ ಮಾಡಿ ಮಾಹಿತಿ ಒದಗಿಸಿದಲ್ಲಿ ಕೂಡಲೇ ಸ್ಥಳಕ್ಕೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಆಗಮಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಮನೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಅನುಮಾನಸ್ಪದ ವ್ಯಕ್ತಿಗಳು ಕಂಡುಬAದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ ೧೧೨ ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಕೋರಿರುವ ಕೆ. ರಾಮರಾಜನ್, ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ತಿಳಿಸಿದ್ದಾರೆ.