ವಿರಾಜಪೇಟೆ, ಡಿ. ೨೪ : ಸರಕಾರದ ವತಿಯಿಂದ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತ ಸಮೂಹದ ಅಭಿವೃದ್ಧಿಗೆ ಸುಮಾರು ಇಪ್ಪತ್ತು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿಸಿದ ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರಿಗೆ ಜಿಲ್ಲೆಯ ಮಸೀದಿಯ ಅಧ್ಯಕ್ಷರುಗಳು ಆಗಮಿಸಿ ಸನ್ಮಾನ ಮಾಡಿದರು.

ಈ ಸಂದರ್ಭ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಅಧ್ಯಕ್ಷ ಹನೀಫ, ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೊಳುಮಂಡ ರಫೀಕ್, ಹಿರಿಯರಾದ ಎರ್ಮು ಹಾಜಿ, ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಅಲ್ಲದೆ ಮುಂದಿನ ದಿನಗಳಲ್ಲಿ ಅಲ್ಪಸಂಖ್ಯಾತ ಸಚಿವರನ್ನು ಜಿಲ್ಲೆಗೆ ಕರೆಸಿಕೊಂಡು ಬೃಹತ್ ಸಮಾವೇಶ ನಡೆಸಿಕೊಡುವಂತೆ ಶಾಸಕರಲ್ಲಿ ಮನವಿ ಮಾಡಿದರು.