ಮಡಿಕೇರಿ, ಡಿ. ೨೪: ಮಡಿಕೇರಿ ಕೊಡವ ಸಮಾಜದ ವತಿಯಿಂದ ತಾ. ೨೭ ರಂದು ಪುತ್ತರಿ ಊರೊರ್ಮೆ ಕಾರ್ಯಕ್ರಮ ನಡೆಯಲಿದೆ.

ಅಂದು ಬೆಳಿಗ್ಗೆ ೧೦,೩೦ಕ್ಕೆ ಸಮಾಜದ ಸಭಾಂಗಣದಲ್ಲಿ ಅಧ್ಯಕ್ಷ ಮಂಡುವAಡ ಪಿ. ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚಿರಿಯಪಂಡ ಸುರೇಶ್ ನಂಜಪ್ಪ ಅವರು ಪಾಲ್ಗೊಳ್ಳಲಿದ್ದಾರೆ.

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಸನ್ಮಾನ ಕಾರ್ಯಕ್ರಮದ ಬಳಿಕ ಅಪರಾಹ್ನ ೨.೩೦ಕ್ಕೆ ಸಮಾಜದಿಂದ ಕೋಲ್‌ಮಂದ್ ತನಕ ಮೆರವಣಿಗೆ ನಡೆಯಲಿದೆ. ಬಳಿಕ ಮಂದ್‌ನಲ್ಲಿ ಕೋಲಾಟ್, ಬೊಳಕಾಟ್, ಉಮ್ಮತ್ತಾಟ್‌ನಂತಹ ಜನಪದ ಕಲೆಗಳ ಪ್ರದರ್ಶನದೊಂದಿಗೆ ಊರೊರ್ಮೆ ಕಾರ್ಯಕ್ರಮ ಮುಕ್ತಾಯಗೊಳ್ಳಲಿದೆ.