ಚೆಯ್ಯಂಡಾಣೆ, ಡಿ. ೨೪: ನಾಪೋಕ್ಲು ಕೊಡವ ಸಮಾಜಕ್ಕೆ ತೆರಳುವ ಪಂಚಾಯತ್ ರಾಜ್ ಇಲಾಖೆಯಿಂದ ಬಿಡುಗಡೆಯಾದ ರೂ. ೨೦ ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ಲೋಕಾರ್ಪಣೆಗೊಳಿಸಿದರು.

ಬಳಿಕ ಮಾತನಾಡಿದ ಶಾಸಕರು, ಹಲವು ವರ್ಷಗಳಿಂದ ನಾಪೋಕ್ಲು ಕೊಡವ ಸಮಾಜಕ್ಕೆ ತೆರಳುವ ರಸ್ತೆ ಹದಗೆಟ್ಟಿದ್ದು ದುರಸ್ತಿಪಡಿಸುವಂತೆ ಕೊಡವ ಸಮಾಜದ ಅಧ್ಯಕ್ಷ ಮುಂಡAಡ ನಾಣಯ್ಯ ಹಾಗೂ ಈ ಭಾಗದ ಸ್ಥಳೀಯರು ಮನವಿ ಮಾಡಿದ್ದರು. ಅದರಂತೆ ಪಂಚಾಯತ್ ರಾಜ್ ಇಲಾಖೆಯ ಪ್ರಗತಿಪತ ಯೋಜನೆ ಅಡಿಯಲ್ಲಿ ಈ ರಸ್ತೆಯ ಒಂದು ಭಾಗವನ್ನು ತುರ್ತಾಗಿ ೨೦ ಲಕ್ಷ ರೂ.ಗಳ ಅನುದಾನದಲ್ಲಿ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಲಾಗಿದ್ದು, ಅದರ ಉದ್ಘಾಟನೆ ನೆರವೇರಿಸಿದ್ದೇವೆ. ಇದೇ ಮಾರ್ಗವಾಗಿ ಅಜ್ಜಿಮುಟ್ಟ-ಎಮ್ಮೆಮಾಡು ಗ್ರಾಮಕ್ಕೆ ತೆರಳುವ ೩.೫ ಕಿಮೀ. ರಸ್ತೆಯನ್ನು ಪಂಚಾಯತ್ ರಾಜ್ ಇಲಾಖೆಯ ಪ್ರಗತಿಪತ ಯೋಜನೆ ಅಡಿಯಲ್ಲಿ ಸೇರ್ಪಡೆಗೊಳಿಸಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಕಾಮಗಾರಿ ನಡೆಸಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭ ನಾಪೋಕ್ಲು ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಪೊನ್ನಣ್ಣ ಅವರನ್ನು ಕೊಡವ ಸಮಾಜದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ಈ ಸಂದರ್ಭ ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಕೊಡವ ಸಮಾಜದ ಅಧ್ಯಕ್ಷ ಮುಂಡAಡ ಸಿ. ನಾಣಯ್ಯ, ಉಪಾಧ್ಯಕ್ಷ ಕರವಂಡ ಲವ ನಾಣಯ್ಯ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಕೆಡಿಪಿ ಸದಸ್ಯರಾದ ಅಬ್ದುಲ್ ರಹ್ಮಾನ್, ಕಲಿಯಂಡ ಕೌಶಿಕ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಬೊಳ್ಳಂಡ ಶರಿನ್, ಅಕ್ರಮ-ಸಕ್ರಮ ಸಮಿತಿ ತಾಲೂಕು ಅಧ್ಯಕ್ಷ ನೆರವಂಡ ಉಮೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಮಾಚೆಟ್ಟಿರ ಕುಶು ಕುಶಾಲಪ್ಪ, ಕುಲ್ಲೇಟಿರ ಅರುಣ್ ಬೇಬ, ಕುಲ್ಲೇಟಿರ ಹೇಮಾವತಿ ಅರುಣ್, ಮೊಹಮ್ಮದ್, ಕೊಡವ ಸಮಾಜದ ನಿರ್ದೇಶಕರಾದ ನಾಯಕಂಡ ಮುತ್ತಪ್ಪ, ಕುಟ್ಟಂಜೆಟ್ಟಿರ ಶಾಮ್ ಬೋಪಣ್ಣ, ನಾಯಕಂಡ ಜೂಬಿ, ಬಾಳೆಯಡ ನಿಷಾ ಮೇದಪ್ಪ, ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ, ಯೂತ್ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಪರವಂಡ ಸಿರಾಜ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್, ನಾಪೋಕ್ಲು ಯೂತ್ ಕಾಂಗ್ರೆಸ್ ಅಧ್ಯಕ್ಷ ಹಂಸು ಕೊಡಿ, ಕಲಿಯಂಡ ಸಂಪನ್ ಅಯ್ಯಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಮಿಟ್ಟು ಸೋಮಯ್ಯ, ವಾಸಿಂ ಕ್ಲಾಸಿಕ್, ಉಬೈದ್, ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಹಾಜರಿದ್ದರು.