ಸುಂಟಿಕೊಪ್ಪ, ಡಿ. ೨೬: ಬೆಂಗಳೂರು ಮತ್ತು ತುಮಕೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾವಳಿಗೆ ಕೊಡಗು ತಂಡವನ್ನು ಆಯ್ಕೆಗೊಳಿಸುವ ಪ್ರಕ್ರಿಯೆ ತಾ.೨೮ ರಂದು ನಡೆಯಲಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಕಾರ್ಯದರ್ಶಿ ಪಿ.ಎ.ನಾಗೇಶ್ ಅವರು ಆಯ್ಕೆ ಪ್ರಕ್ರಿಯೆ ಅಮ್ಮತ್ತಿಯ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಆಟಗಾರರು ಪೂರ್ಣ ಫುಟ್ಬಾಲ್ ಕಿಟ್ ಆಧಾರ್ ಮೂಲಪ್ರತಿ ಬ್ಯಾಂಕ್ ಪಾಸ್ ಪುಸ್ತಕ ಒಂದು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಹೊಂದಿಕೊAಡು ಬೆಳಿಗ್ಗೆ ೧೦ ಗಂಟೆಗೆ ಹಾಜರಾಗಬೇಕೆಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ. ೯೪೮೧೦೫೮೨೫೬ ಸಂಪರ್ಕಿಸಬಹುದು.