ಸೋಮವಾರಪೇಟೆ, ಡಿ. ೨೬: ಅಧ್ಯಾತ್ಮಿಕ ಗುರು ಶ್ರೀ ರವಿಶಂಕರ್ ಗುರೂಜಿ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸ್ಥಳೀಯ ಘಟಕದ ವತಿಯಿಂದ ಪಟ್ಟಣದಲ್ಲಿ ವಿಶ್ವ ಧ್ಯಾನ ದಿನಾಚರಣೆ ನಡೆಯಿತು.
ಪಟ್ಟಣದ ಹನಿ ಸೊಸೈಟಿ ಕಟ್ಟಡದಲ್ಲಿರುವ ಆರ್ಟ್ ಆಫ್ ಲಿವಿಂಗ್ ಸೆಂಟರ್ನ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಸ್ಥೆಯ ಶಿಕ್ಷಕಿ ರಾಗಿಣಿ ಅವರ ನೇತೃತ್ವದಲ್ಲಿ ಧ್ಯಾನ, ಯೋಗಾಸನ, ಪ್ರಾಣಾಯಾಮಗಳು ನಡೆದವು.
ಸಂಸ್ಥೆಯ ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಧ್ಯಾನದ ಮಹತ್ವದ ಬಗ್ಗೆ ಶಿಕ್ಷಕಿ ರಾಗಿಣಿ ಮಾಹಿತಿ ನೀಡಿದರು.