ನಾಪೋಕ್ಲು, ಡಿ. ೨೮: ಕೊಡಗು ಜಿಲ್ಲಾ ಪಂಚಾಯಿತಿ, ಸಮಗ್ರ ಶಿಕ್ಷಣ ಕರ್ನಾಟಕ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಚೇರಿ ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲೂಕಿನ ಆಯ್ದ ವಿಶೇಷಚೇತನ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಮಡಿಕೇರಿ ಜೂನಿಯರ್ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿತ್ತು.

ಸಮಾರಂಭದ ಅಧ್ಯಕ್ಷತೆಯನ್ನು ವೈದ್ಯಾಧಿಕಾರಿ ಸುಷ್ಮಾ ವಹಿಸಿ ಮಾತನಾಡಿ, ಶಿಬಿರದ ಪ್ರಯೋಜನವನ್ನು ಮಕ್ಕಳು ಪಡೆದುಕೊಳ್ಳುವಂತಾಗಬೇಕು ಎಂದು ತಿಳಿಸಿದರು. ಮಾನಸಿಕ ತಜ್ಞ ವೈದ್ಯ ರಮೇಶ್ ಮಾತನಾಡಿ, ನಾವು ಇಂದು ಮಕ್ಕಳ ತಪಾಸಣೆ ನಡೆಸುತ್ತಿದ್ದು, ಸಾಧನ - ಸಲಕರಣೆಗಳ ಬಗ್ಗೆ ಆಲಿಂಕೋ ಸಂಸ್ಥೆಯವರು ಅಳತೆ ತೆಗೆದುಕೊಂಡು ಮುಂದಿನ ದಿನಗಳಲ್ಲಿ ಸರ್ಕಾರದ ವತಿಯಿಂದ ಮಕ್ಕಳಿಗೆ ವಿತರಣೆ ಮಾಡುತ್ತಾರೆ ಎಂದರು. ವೇದಿಕೆಯಲ್ಲಿ ಕಲ್ಪನಾ ಮತ್ತು ಬಿಆರ್‌ಪಿ ಮಂಜುಳಾ ಉಪಸ್ಥಿತರಿದ್ದರು.

ಅತಿಥಿಗಳು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ಬಿಐಆರ್‌ಟಿ ವೀಣಾ ಸ್ವಾಗತಿಸಿ, ಬಿಆರ್‌ಸಿ ಶರ್ಮಿಳಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಬಿಐಈಆರ್‌ಟಿ ದಿವ್ಯ ನಿರೂಪಿಸಿ, ಗಾಯಿತ್ರಿ ವಂದಿಸಿದರು.