ಬೊಳ್ಳೂರು, ಡಿ. ೨೮: ಸಮೀಪದ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಳ್ಳೂರಿನ ಐಶ್ವರ್ಯ ಪಬ್ಲಿಕ್ ಸ್ಕೂಲ್ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ನೃತ್ಯ ಕಲಾಂಜಲಿ ಮತ್ತು ಕಾಲೇಜು ವಾರ್ಷಿಕೋತ್ಸವ ಸಮಾರಂಭ ನಡೆಯಿತು.

ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಪ್ರಧಾನ ಕಾರ್ಯದರ್ಶಿ, ವೀರಾಜಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಎನ್.ಕೆ. ಜ್ಯೋತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೋಷಕರು ತಮ್ಮ ಮಕ್ಕಳಲ್ಲಿ ಬಾಲ್ಯದಿಂದಲೇ ಉತ್ತಮ ಸಂಸ್ಕಾರ, ಉತ್ತಮ ಗುಣ ಹಾಗೂ ಹವ್ಯಾಸವನ್ನು ಬೆಳೆಸುವ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕು ಎಂದರು.

ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಹಂಡ್ರAಗಿ ನಾಗರಾಜು ಮಾತನಾಡಿ, ಐಶ್ವರ್ಯ ವಿದ್ಯಾಸಂಸ್ಥೆ ಮಕ್ಕಳಿಗೆ ಉತ್ತಮ ಗುಣಾತ್ಮಕ ಶಿಕ್ಷಣದೊಂದಿಗೆ ಅವರಿಗೆ ಕೌಶಲ್ಯಗಳನ್ನು ಕಲಿಸುತ್ತಿದೆ. ಈ ಸಂಸ್ಥೆ ಪ್ರತಿವರ್ಷ ಪಿಯುಸಿ ಪರೀಕ್ಷೆಯಲ್ಲಿ ಶೇ. ೧೦೦ ಫಲಿತಾಂಶ ತರುವ ಮೂಲಕ ಉತ್ತಮ ಸಾಧನೆ ಮಾಡುತ್ತಿದ್ದು, ಸಂಸ್ಥೆ ಅಧ್ಯಕ್ಷರು ಹಾಗೂ ಶಿಕ್ಷಕ ವರ್ಗದ ಕೊಡುಗೆ ಅಪಾರವಾಗಿದೆ ಎಂದರು.

ಐಶ್ವರ್ಯ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪುಲಿಯಂಡ ರಾಮ್ ದೇವಯ್ಯ ಅಧ್ಯಕ್ಷತೆ ವಹಿಸಿದ್ದರು. ಐಶ್ವರ್ಯ ಪಿಯು ಕಾಲೇಜು ಪ್ರಾಂಶುಪಾಲ ಎ. ಜೋಯಪ್ಪ ಐಶ್ವರ್ಯ ಪಬ್ಲಿಕ್ ಸ್ಕೂಲ್ ಹಾಗೂ ಕಾಲೇಜಿನ ವರದಿ ವಾಚಿಸಿದರು.

ಐಶ್ವರ್ಯ ವಿದ್ಯಾಸಂಸ್ಥೆ ಪ್ರಮುಖರಾದ ಪುಲಿಯಂಡ ಸುಬ್ಬಯ್ಯ, ಜಯಂತಿ ಸುಬ್ಬಯ್ಯ ಹಾಗೂ ಕಾವೇರಮ್ಮ, ಪುಲಿಯಂಡ ರಾಮು, ಕಾಲೇಜಿನ ಉಪ ಪ್ರಾಂಶುಪಾಲ ಮದನ್ ಪಾಲ್ಗೊಂಡಿದ್ದರು. ಉಪನ್ಯಾಸಕರಾದ ರೇಷ್ಮ ನವೀನ ಸ್ವಾಗತಿಸಿದರು. ಹರ್ಷಿತ ದೇಚಮ್ಮ ವಂದಿಸಿದರು. ಶೆರ್ಲಿ ಸುಬ್ಬಯ್ಯ ನಿರೂಪಿಸಿದರು. ಇದೇ ಸಂದರ್ಭ ಎನ್.ಕೆ. ಜ್ಯೋತಿ ಮತ್ತು ಹಂಡ್ರAಗಿ ನಾಗರಾಜು ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು. ನಂತರ ಐಶ್ವರ್ಯ ಪಬ್ಲಿಕ್ ಸ್ಕೂಲ್ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.