ವೀರಾಜಪೇಟೆ, ಡಿ. ೨೮: ಪಾಲಿಬೆಟ್ಟ ಭಾಗದಲ್ಲಿ ಶಾಸಕರ ನಿಧಿಯ ರೂ. ೨೦ ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ವಿವಿಧ ರಸ್ತೆಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಇತ್ತೀಚೆಗೆ ನೆರವೇರಿಸಿದರು.
ಈ ಸಂದರ್ಭ ಸ್ಥಳೀಯರು ಶಾಸಕರನ್ನು ಸನ್ಮಾನಿಸಿದರು. ಕಾಂಗ್ರೆಸ್ ವಲಯ ಅಧ್ಯಕ್ಷ ಕಾಳಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗಣೇಶ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ರಫೀಕ್, ರಜಾಕ್, ಪಂಚಾಯಿತಿ ಸದಸ್ಯರಾದ ಪವಿತ್ರ, ನಾಸಿರ್, ಗಣಪತಿ, ಕಂಜಿತAಡ ದೇಚಿ ಪೂವಣ್ಣ, ಗಣೇಶ್, ಕುಟ್ಟಂಡ ಕುಟ್ಟಪ್ಪ, ಸತ್ಯ ಮಾದಪ್ಪ, ಕೊಂಗAಡ ಮಾದಪ್ಪ, ಮಾಳೇಟಿರ ಗಣಪತಿ, ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ಥಳೀಯ ಪ್ರಮುಖರು ಹಾಜರಿದ್ದರು.