ಮಡಿಕೇರಿ, ಡಿ. ೩೧: ಪಾರ್ಕ್ನಲ್ಲಿ ಕಸ ಎಸೆದ ವ್ಯಕ್ತಿಗೆ ನಗರಸಭೆ ರೂ. ೫೦೦ ದಂಡ ವಿಧಿಸಿ ಎಚ್ಚರಿಕೆ ನೀಡಿದೆ.

ನಗರದ ಕಾವೇರಿ ಲೇಔಟ್‌ನಲ್ಲಿರುವ ಪಾರ್ಕ್ನಲ್ಲಿ ತ್ಯಾಜ್ಯ ತುಂಬಿದ್ದ ಬ್ಯಾಗ್‌ಗಳು ಕಂಡುಬAದಿವೆೆ. ಇದರಲ್ಲಿದ್ದ ಬಿಲ್‌ಗಳನ್ನು ಪರಿಶೀಲಿಸಿದ ಸಂದರ್ಭ ಹರಿಯಾಣ ಮೂಲದ, ಮಡಿಕೇರಿಯ ಅಂಚೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವ್ಯಕ್ತಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ತಕ್ಷಣ ಆತನನ್ನು ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿ ಪತ್ತೆಹಚ್ಚಿ ಎಚ್ಚರಿಕೆ ನೀಡಿ ನಗರಸಭೆಯಿಂದ ದಂಡ ವಿಧಿಸಿದ್ದಾರೆ. ಯಾರು ಕೂಡ ಸಾರ್ವಜನಿಕ ಪ್ರದೇಶಗಳಲ್ಲಿ ಕಸ ಎಸೆಯಬಾರದು.

ಕಸ ಎಸೆಯುವುದು ಕಂಡು ಬಂದಲ್ಲಿ ಕ್ರಮಕೈಗೊಳ್ಳ ಲಾಗುವುದು. ಸಾರ್ವಜನಿಕರು ಸಹಕಾರ ನೀಡಿ ಸ್ವಚ್ಛ ನಗರ ನಿರ್ಮಾಣಕ್ಕೆ ಕೈ ಜೋಡಿಸುವಂತೆ ಮಹೇಶ್ ಜೈನಿ ಮನವಿ ಮಾಡಿದ್ದಾರೆ.