ಕುಶಾಲನಗರ ಅತಿಥಿ ಕಂಫರ್ಟ್ಸ್ ಹೊಟೇಲ್ ಮಾಲೀಕರಾದ ಕೆ.ಕೆ. ಭಾಸ್ಕರ್ (೭೫) ತಾ ೩೧ರಂದು ನಿಧನರಾದರು.

ಕಳೆದ ಮೂರು ದಶಕಗಳಿಂದ ಕುಶಾಲನಗರ, ಮಡಿಕೇರಿ ಪಟ್ಟಣಗಳಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಭಾಸ್ಕರ್ ಬೆಂಗಳೂರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಭಾಸ್ಕರ್ ಕೊಡಗು ಜಿಲ್ಲಾ ಹೊಟೇಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಲಹೆಗಾರರಾಗಿ, ಕರ್ನಾಟಕ ರಾಜ್ಯ ಹೊಟೇಲ್ ಅಸೋಸಿಯೇಷನ್ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.

೨೦೨೦ರಲ್ಲಿ ಹೊಟೇಲ್ ಉದ್ಯಮದ ಅತ್ಯುತ್ತಮ ಸಾಧನೆಗಾಗಿ ರಾಜ್ಯಮಟ್ಟದ ಆತಿಥ್ಯ ರತ್ನ ಪ್ರಶಸ್ತಿಗೆ ಭಾಜನರಾಗಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಹಾರಂಗಿ ಬಳಿ ನಡೆಯಿತು.

ಸಂತಾಪ : ಭಾಸ್ಕರ್ ಅವರ ನಿಧನಕ್ಕೆ ಕೊಡಗು ಹೊಟೇಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳAಡ ದಿನೇಶ್ ಕಾರ್ಯಪ್ಪ, ಕಾರ್ಯದರ್ಶಿ ನಜೀರ್ ಅಹಮ್ಮದ್ ಹಾಗೂ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ನಾಗೇಂದ್ರ ಪ್ರಸಾದ್ ಸಂತಾಪ ವ್ಯಕ್ತಪಡಿಸಿದ್ದಾರೆ.