ಮಡಿಕೇರಿ, ಜ. ೧: ಶನಿವಾರಸಂತೆ ವಿದ್ಯುತ್ ವಿತರಣಾ ಉಪ ಕೇಂದ್ರದಿAದ ಹೊರಹೊಮ್ಮುವ ಎಫ್೩ ಶನಿವಾರಸಂತೆ ಟೌನ್ ಫೀಡರ್‌ನಲ್ಲಿ ತಾ. ೨ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿAದ ಶನಿವಾರಸಂತೆ ಪಟ್ಟಣ, ಗುಡುಗಳಲೆ, ಕೆ.ಆರ್.ಸಿ ಸರ್ಕಲ್, ಅಡ್ಡಶೆಟ್ಟಳ್ಳಿ, ಶೆಟ್ಟಿಗನಹಳ್ಳಿ, ಮಾದ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ೩೩/೧೧ ಕೆ.ವಿ ಮೂರ್ನಾಡು ವಿದ್ಯುತ್ ವಿತರಣಾ ಉಪ ಕೇಂದ್ರದಿAದ ಹೊರಹೊಮ್ಮುವ ಎಫ್೨ ನಾಪೋಕ್ಲು ಎಫ್೫ ಹೊದ್ದೂರು ಹಾಗೂ ಪಾರಾಣೆ ಫೀಡರ್‌ಗಳಲ್ಲಿ ತಾ. ೨ ರಂದು ಬೆಳಿಗ್ಗೆ ೯ ರಿಂದ ಸಂಜೆ ೫ ಗಂಟೆಯವರೆಗೆ ತುರ್ತು ನಿರ್ವಹಣೆ ಕಾಮಗಾರಿ ನಡೆಯಲಿದ್ದು, ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಪಾಲೂರು, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ, ನರಿಯಂದಡ, ಪಾರಾಣೆ, ಬಲಮುರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.