ಕುಶಾಲನಗರ, ಜ. ೧ ಕುಶಾಲನಗರ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿ ನಿರತರ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಕುಶಾಲನಗರ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಕೊಡುಗೆ ನೀಡಿದ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ ಸಮಾರಂಭ ತಾ. ೩ ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಟಿ.ಆರ್. ಶರಣ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿ, ಸಂಘ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ. ಇದೀಗ ಕುಶಾಲನಗರ ಸರಕಾರಿ ಪದವಿಪೂರ್ವ ತಾಲೂಕಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಂಘದ ಮೂಲಕ ರೂ. ೧೨ ಲಕ್ಷ ವೆಚ್ಚದಲ್ಲಿ ಕಂಪ್ಯೂಟರ್ ಲ್ಯಾಬ್ ಕೊಡುಗೆ ನೀಡಲಾಗಿದೆ.
ಬಡ ಮಧ್ಯಮ ವರ್ಗದ ಮಕ್ಕಳಿಗೆ ಇದರಿಂದ ಅನುಕೂಲವಾಗಲಿದೆ. ಉತ್ತಮ ತಂತ್ರಜ್ಞಾನದೊAದಿಗೆ ಒಟ್ಟು ೨೨ ಕಂಪ್ಯೂಟರ್‌ಗಳನ್ನು ನೀಡಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆಯಬೇಕು. ಕಂಪ್ಯೂಟರ್‌ಗಳ ನಿರ್ವಹಣೆಯನ್ನು ಸಂಘ ವಹಿಸಲಿದೆ ಎಂದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ ಮಂತರ್ ಗೌಡ ಅವರು ಬೆಳಿಗ್ಗೆ ೧೧ ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲ್ಯಾಬ್ ಉದ್ಘಾಟನೆ ಮಾಡಲಿದ್ದಾರೆ.
ಸಂಘದ ಅಧ್ಯಕ್ಷ ಟಿ.ಆರ್. ಶರವಣ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್, ಶಕ್ತಿ ದಿನಪತ್ರಿಕೆ ಸಂಪಾದಕ ಜಿ. ಚಿದ್ವಿಲಾಸ್, ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಸ್.ಎನ್. ರಾಜೇಂದ್ರ, ಪದವಿಪೂರ್ವ ಕಾಲೇಜು ಶಿಕ್ಷಣ ಇಲಾಖೆ ಪ್ರಬಾರ ಉಪ ನಿರ್ದೇಶಕ ಪಿ.ಆರ್. ವಿಜಯ್, ಪ್ರಬಾರ ಪ್ರಾಂಶುಪಾಲರಾದ ಬಿ.ಜಿ. ಶಾಂತಿ ಮತ್ತು ಆಡಳಿತ ಮಂಡಳಿ ನಿರ್ದೇಶಕರುಗಳು ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷರಾದ ಜೋಸೆಫ್ ವಿಕ್ಟರ್ ಸೋನ್ಸ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಡಿ. ಶ್ರೀಜೇಶ್, ವ್ಯವಸ್ಥಾಪಕ ಆರ್. ರಾಜು ಮತ್ತು ಸಂಘದ ನಿರ್ದೇಶಕರುಗಳು ಇದ್ದರು.