ಮಡಿಕೇರಿ, ಜ.೯: ಸೋಮವಾರಪೇಟೆ ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೂತಿ ಗ್ರಾಮದಲ್ಲಿ ಕುಟುಂಬಗಳಿಗೆ ಬಹಿಷ್ಕಾರ ಹಾಕಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಇಂದು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಅವರು ಬಹಿಷ್ಕೃತ ಕುಟುಂಬಸ್ಥರನ್ನು ಕಚೇರಿಗೆ ಕರೆಸಿಕೊಂಡು ವಿಚಾರಣೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಬಹಿಷ್ಕಾರಕ್ಕೆ ಒಳಗಾಗಿರುವ ಅಜಂತ, ನವೀನ್ ಅವರುಗಳ ಕುಟುಂಬಸ್ಥರನ್ನು ಕರೆಸಿಕೊಂಡು ಅವರುಗಳಿಂದ ಎಲ್ಲಾ ಮಾಹಿತಿ ಹಾಗೂ ದಾಖಲೆಗಳನ್ನು ಪಡೆದುಕೊಂಡಿದ್ದಾರೆ. ಇದರೊಂದಿಗೆ ಕೂತಿ ಗ್ರಾಮ ಸಮಿತಿಯವರನ್ನೊಳಗೊಂಡು ಸಭೆ ತಾ.೧೨ರ ಸೋಮವಾರ ಏರ್ಪಡಿಸಿದ್ದಾರೆ.

ಸಭೆಗೆ ಹಾಜರಾಗುವಂತೆ ಗ್ರಾಮ ಪಂಚಾಯ್ತಿ ಮೂಲಕ ಗ್ರಾಮಸ್ಥರಿಗೆ ನೋಟೀಸ್ ಕಳುಹಿಸಲಾಗಿದ್ದು, ಪಂಚಾಯಿತಿ ಸಿಬ್ಬಂದಿಗಳು, ಗ್ರಾಮಸ್ಥರಿಗೆ ನೋಟೀಸ್ ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಈ ಸಭೆ ಏರ್ಪಡಿಸಿದ್ದಾರೆ.