ಸಿದ್ದಾಪುರ, ಜ.೧೧: ಮನುಷ್ಯನ ಜೀವನದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದೆ. ಸರ್ವರೂ ಶಿಕ್ಷಿತರಾಗಬೇಕು ಶಿಕ್ಷಿತ ಸಮಾಜ ನಿರ್ಮಾಣವಾಗಬೇಕು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಬದ್ದವಾಗಿದೆ ಎಂದು ವೀರಾಜಪೇಟೆ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಹೇಳಿದರು.
ಕರ್ನಾಟಕ ಸರ್ಕಾರ ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು, ವತಿಯಿಂದ ವೀರಾಜಪೇಟೆ ತಾಲೂಕು ಕೆದಮುಳ್ಳೂರು ತೋರ ಗ್ರಾಮದ ಸರ್ವೆ ಸಂಖ್ಯೆ ೫೧೧/೧ ರಲ್ಲಿ ೫ ಎಕ್ರೆ ೨೦ಸೆಂಟು ಜಾಗದಲ್ಲಿ ೧೬ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಂಕುಸ್ಥಾಪನೆ ನೆರೆವೇರಿಸಿ ಅವರು ಮಾತನಾಡಿದರು. ಶಿಕ್ಷಣದಿಂದ ಮಾತ್ರ ಸುಶಿಕ್ಷಿತ ಸಮಾಜ ನಿರ್ಮಾಣ ಸಾಧ್ಯ, ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಬ್ಯಾಸ ನೀಡುವ ಚಿಂತನೆಯಲ್ಲಿ ಸರ್ಕಾರ ಏಕಲವ್ಯ ವಸತಿ ಶಾಲೆ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಪ್ರಾರಂಭಿಸಿತು. ತಿತಿಮತಿ ಹೋಬಳಿಯ ಹುದಿಕೇರಿ ಮತ್ತು ವೀರಾಜಪೇಟೆ ಎರಡು ವಸತಿ ಶಾಲೆಗೆ ಬೇಡಿಕೆ ಇಟ್ಟಿದ್ದೆವು.
ಸಮಾಜ ಕಲ್ಯಾಣ ಸಚಿವರಾಗಿರುವ ಹೆಚ್.ಸಿ. ಮಹದೇವಪ್ಪ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಮನವಿ ಮೇರೆಗೆ ಶಾಲಾ ಕಟ್ಟಡಕ್ಕೆ ಅವರು ಅನುದಾನ ಬೀಡುಗಡೆಗೊಳಿಸಿದ್ದಾರೆ. ಒತ್ತುವರಿಯಾಗಿದ್ದ ಸರ್ಕಾರಿ ಸ್ಥಳವನ್ನು ಗುರುತಿಸಿ ಒತ್ತುವರಿ ತೆರವುಗೊಳಿಸಿ ಪ್ರಸ್ತುತ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಸ್ಥಳದಲ್ಲಿ ೧೬ಕೋಟಿ ವೆಚ್ಚದ ವಸತಿ ಶಾಲೆ ಕಟ್ಟಡ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಹೇಳಿದರು. ಒತ್ತುವರಿ ತೆರವುಗೊಳಿಸಲು ಕೆದಮುಳ್ಳೂರು ಗ್ರಾಮ ಪಂಚಾಯಿತಿ ಸದಸ್ಯ ಮತ್ತು ಕೆ.ಡಿ.ಪಿ ಸದಸ್ಯ ಪ್ರಶಾಂತ್ ಉತ್ತಪ್ಪ ಮತ್ತು ವಿಜಯ್ ಹಾಗೂ ಇತರರ ಶ್ರಮದಿಂದ ಸಾಧ್ಯವಗಿರುವುದು ಶ್ಲಾಘನೀಯ ಎಂದರಲ್ಲದೆ. ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಅಭಿಯಂತರರು ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು. ಕೆದಮುಳ್ಳೂರು ಗ್ರಾಮ ಪಂಚಾಯಿತಿ ಸದಸ್ಯ ಮಾಳೇಟಿರ ಪ್ರಶಾಂತ್ ಉತ್ತಪ್ಪ ಮಾತನಾಡಿ ತೋರ ಗ್ರಾಮ ಶಾಸಕರ ಪ್ರಯತ್ನದಿಂದ ಅಭಿವೃದ್ಧಿ ಪಥದಲ್ಲಿರುವ ಗ್ರಾಮ ಎಂದಿನಿಸಿಕೊAಡಿದೆ. ಎಂದರು.
ಕಾರ್ಯಕ್ರಮದ ವೇದಿಕೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕೆದಮುಳ್ಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಂ.ಎA. ಪರಮೇಶ್ವರ, ಸದಸ್ಯರಾದ ಕೆ.ರಾಮಯ್ಯ, ಮೀನಾಕ್ಷಿ, ಪಿ.ಜಯಂತಿ, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಲಿಂಗರಾಜ್ ಉಪಸ್ಥಿತರಿದ್ದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕರಾದ ದಿಲನ್ ಸೇರಿದಂತೆ ಇತರ ಶಿಕ್ಷಕರು, ಗುತ್ತಿಗೆದಾರರು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಪಕ್ಷದ ಪ್ರಮುಖರು, ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಹಾಜರಿದ್ದರು.