ಮಡಿಕೇರಿ, ಜ.೨೧: ೨೦೨೫-೨೬ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ೨೦೨೪ನೇ ಕ್ಯಾಲೆಂಡರ್ ವರ್ಷದಲ್ಲಿ (೦೧-೦೧-೨೦೨೪ ರಿಂದ ೩೧-೧೨-೨೦೨೪) ಅಂತರರಾಷ್ಟಿçÃಯ, ರಾಷ್ಟಿçÃಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅದರಂತೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಕ್ರೀಡಾಪಟುಗಳು ಅರ್ಜಿಯನ್ನು ಅಧಿಕೃತ ಜಾಲತಾಣ: hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ನಿಗದಿತ ದಿನಾಂಕದೊಳಗೆ ಸಲ್ಲಿಸಲು ಸೂಚಿಸಿದೆ. ಅರ್ಜಿ ಸಲ್ಲಿಸಲು ಜನವರಿ, ೩೧ ಕಡೆಯ ದಿನವಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಕಟಣೆ ತಿಳಿಸಿದೆ.