ಮಡಿಕೇರಿ, ಜ. ೨೧: ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ, ಕೊಡಗು ಹಾಗೂ ತಾಲೂಕು ಸಂಘಗಳ ಆಶ್ರಯದಲ್ಲಿ ಜರುಗಿದ ೪ನೇ ಆವೃತ್ತಿಯ ವಿಪ್ರ ಕ್ರೀಡೋತ್ಸವದ ಸಮಾರೋಪ ಸಮಾರಂಭ ತಾ.೨೫ ರಂದು ನಗರದ ಲಕ್ಷಿö್ಮÃ ನರಸಿಂಹ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ ೯ ಗಂಟೆಗೆ ನಡೆಯಲಿದೆ. ಜಿಲ್ಲಾ ಮಟ್ಟದ ಒಳಾಂಗಣ ಕ್ರೀಡೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಅಂದು ನಡೆಯಲಿವೆ. ಬೆ.೯ ಗಂಟೆಯಿAದ ಜಿಲ್ಲಾ ಮಟ್ಟದ ಒಳಾಂಗಣ ಕ್ರೀಡೆಗಳು ನಡೆಯಲಿವೆ. ಡಾ. ರಾಜಾರಾಮ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಪ್ರತಿಭಾ ಪುರಸ್ಕಾರ, ಸನ್ಮಾನ ಹಾಗೂ ಬಹುಮಾನ ವಿತರಣೆ ನಡೆಯಲಿದೆ. ಪತ್ರಕರ್ತ ಅನಿಲ್ ಎಚ್.ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ವಿದ್ಯಾಭಿವೃದ್ಧಿ ನಿಧಿ ಅಧ್ಯಕ್ಷ ರಾಮಚಂದ್ರ ಮೂಗೂರು ತಿಳಿಸಿದ್ದಾರೆ.