ಮಡಿಕೇರಿ, ಜ. ೨೧: ಜಿಲ್ಲಾಡಳಿತ ವತಿಯಿಂದ ತಾ. ೨೬ ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ೭೭ನೇ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.