ಮಡಿಕೇರಿ, ಜ. ೨೧: ಮಡಿಕೇರಿ ಮಹದೇವಪೇಟೆಯಲ್ಲಿರುವ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದ ೧೨ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು.

ಬೆಳಿಗ್ಗೆ ೮ಕ್ಕೆ ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ೯ ಕ್ಕೆ ಗಣಪತಿ ಹೋಮ, ನವಗ್ರಹ ಹೋಮ, ವಾಸವಿ ಹೋಮ ನಡೆಯಿತು. ಮಧ್ಯಾಹ್ನ ೧೨ ಗಂಟೆಗೆ ಮಹಾ ಮಂಗಳಾರತಿ ನಂತರ ಅನ್ನಪ್ರಸಾದ ವಿತರಣೆ ನಡೆಯಿತು.