ಮಡಿಕೇರಿ, ಜ. ೨೧: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಕಕ್ಕಬ್ಬೆ ನಾಲ್ನಾಡ್ ಪೂಮಲೆ ಕುಡಿಯ ಸಾಂಸ್ಕೃತಿಕ ಸಮಿತಿ ಇವರ ವತಿಯಿಂದ ಕುಡಿಯಡ ಸಾಂಸ್ಕೃತಿಕ ನಮ್ಮೆ-೨೦೨೬ ಕಾರ್ಯಕ್ರಮವು ಫೆಬ್ರವರಿ ೧ ರಂದು ಬೆಳಿಗ್ಗೆ ೧೦ ಗಂಟೆಗೆ ಯವಕಪಾಡಿ ಸಮುದಾಯ ಭವನದಲ್ಲಿ ನಡೆಯಲಿದೆ. ಯವಕಪಾಡಿ ಗ್ರಾಮದ ಹಿರಿಯರಾದ ಕುಯಿನಾಲಮಲೆ ಸೀತಮ್ಮ ಕರುಂಬಯ್ಯ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಇತರರು ಪಾಲ್ಗೊಳ್ಳಲಿದ್ದಾರೆ. ಕಾಯಕ್ರಮದಲ್ಲಿ ವಿಚಾರಗೋಷ್ಠಿ ಹಾಗೂ ಕವಿಗೋಷ್ಠಿ ನಡೆಯಲಿದೆ.