ಸೋಮವಾರಪೇಟೆ, ಜ. ೨೧: ತಾಲೂಕಿನ ಕೊಡ್ಲಿಪೇಟೆ ಸಮೀಪದ ಖ್ಯಾತೆ ಗ್ರಾಮದಲ್ಲಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗೆ ೬ನೇ ತರಗತಿಯ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದ್ದು, ಮಾಹಿತಿ ಕಾರ್ಯಕ್ಕೆ ಶಾಸಕ ಡಾ. ಮಂತರ್ ಗೌಡ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಡಾ. ಮಂತರ್ ಗೌಡ, ವಸತಿ ಶಾಲೆಗಳಲ್ಲಿ ಬಡ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ಮೂಲಕ ಸರ್ಕಾರ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದೆ. ಜಿಲ್ಲೆಯ ವಿದ್ಯಾರ್ಥಿಗಳು ಹೆಚ್ಚು ಸದುಪಯೋಗ ಪಡೆಯಬೇಕು. ಈ ಶಾಲೆಯಲ್ಲಿ ಸಿಬಿಎಸ್‌ಇ ಪಠ್ಯಕ್ರಮ ಒಳಗೊಂಡಿದ್ದು, ಎಲ್ಲಾ ವರ್ಗದ ಮಕ್ಕಳಿಗೆ ಉಚಿತ ಶಿಕ್ಷಣದ ಅವಕಾಶ ಇರುವುದರಿಂದ ಪೋಷಕರು ತಮ್ಮ ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಗಮನಹರಿಸಬೇಕು ಎಂದರು.

ಶಾಲೆಯ ಪ್ರಾಂಶುಪಾಲ ಡಾ. ಗುರುಸ್ವಾಮಿ ಮಾತನಾಡಿ, ಶಾಲೆಗೆ ಪ್ರವೇಶ ಆರಂಭವಾಗಿದ್ದು, ಫೆ.೧೫ರ ಒಳಗೆ ಅರ್ಜಿ ಸಲ್ಲಿಸಬೇಕಿದೆ. ಆಸಕ್ತ ವಿದ್ಯಾರ್ಥಿಗಳು ತಮ್ಮ ಎಸ್‌ಎಟಿಎಸ್ ಸಂಖ್ಯೆ, ಜಾತಿ ಹಾಗೂ ಆದಾಯ ಪ್ರಮಾಣ ಪತ್ರದ ನೋಂದಣಿ ಸಂಖ್ಯೆಯೊAದಿಗೆ, hಣಣಠಿs://sevಚಿsiಟಿಜhuseಡಿviಛಿes.ಞಚಿಡಿಟಿಚಿಣಚಿಞಚಿ.gov.iಟಿ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಮಾಹಿತಿ ನೀಡಿದರು. ಪ್ರಮುಖವಾಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ, ಜೆ.ಇ., ನೀಟ್ ಪರೀಕ್ಷೆಗಳಿಗೆ ಉಚಿತ ಕೋಚಿಂಗ್ ಕೂಡ ನೀಡಲಾಗುವುದು ಎಂದು ತಿಳಿಸಿದರು.

ಶಾಲೆಯ ಸಿಬ್ಬಂದಿಗಳಾದ ಬಿ.ಎಸ್. ನಂಜುAಡಸ್ವಾಮಿ, ವಶೀಮ ಬಾನು, ಮಂಜುನಾಥ್, ಪವನ್ ಸೇರಿದಂತೆ ಇತರರು ಇದ್ದರು.