ಕೂಡಿಗೆ, ಜ. ೨೧: ಶ್ರೀ ನಾನಕ ಝಿರಾ ಸಾಹೇಬ್ ಫೌಂಡೇಷನ್ ವತಿಯಿಂದ ಗುರುನಾನಕ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ದಿ. ಸರ್ದಾರ್ ಜೋಗಾಸಿಂಗ್ ೯೩ನೇ ಜನ್ಮ ದಿನದ ನಿಮಿತ್ತ ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಬೀದರ್‌ನ ಗುರುನಾನಕ ದೇವ ಇಂಜಿನಿಯರಿAಗ್ ಕಾಲೇಜಿನಲ್ಲಿ ಶೈಕ್ಷಣಿಕ ಮತ್ತು ಕೃಷಿಯಲ್ಲಿನ ಸೇವೆಗಾಗಿ ಉನ್ನತ ಶಿಕ್ಷಣ ಮತ್ತು ಕೃಷಿ ದಾರ್ಶನಿಕ ಸರ್ದಾರ್ ಜೋಗಾಸಿಂಗ್ ಕಲ್ಯಾಣ ಕರ್ನಾಟಕ ಪ್ರಶಸ್ತಿ-೨೦೨೬ ಪ್ರಶಸ್ತಿ ನೀಡಿ ಗೌರವಿಸಿದೆ.

ಶೈಕ್ಷಣಿಕ ಮತ್ತು ಕೃಷಿ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಷ್ಟಿçÃಯ ಮತ್ತು ಅಂತರ ರಾಷ್ಟಿçÃಯ ಮಟ್ಟದಲ್ಲಿ ಹಲವಾರು ಪ್ರಶಸ್ತಿ ಗೌರವಗಳಿಗೆ ಭಾಜನರಾಗಿರುವ ಕೊಡಗು ಕುಲಪತಿಗಳಾಗಿರುವ ವಿಶ್ವವಿದ್ಯಾಲಯದ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ಫೆಲೋಶಿಪ್ ಪ್ರಶಸ್ತಿ ಕೂಡ ಲಭಿಸಿದೆ.