ವೀರಾಜಪೇಟೆ, ಜ. ೨೧: ತನ್ನ ಅವಧಿಯಲ್ಲಿ ಕ್ರೀಡೆಗೆ ಸಾಧ್ಯವಾದಷ್ಟು ಅಧಿಕ ಪ್ರೋತ್ಸಾಹ ನೀಡಲು ನಿರ್ಧರಿಸಿದ್ದು, ವಾಲಿಬಾಲ್ ಅಸೋಸಿಯೇÃಷನ್ ಅವರ ಬೇಡಿಕೆಗಳನ್ನು ಪರಿಗಣಿಸಿ ಅಗತ್ಯ ಕ್ರಮವನ್ನು ಕೈಗೊಳ್ಳುವುದಾಗಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭರವಸೆ ನೀಡಿದರು.
ವೀರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ವಾಲಿಬಾಲ್ ಅಸೋಸಿಯೇಷನ್, ಕೊಡಗು ಇವರೊಂದಿಗೆ ವಿಶೇಷ ಸಭೆ ನಡೆಸಿದ ಶಾಸಕರು, ವಾಲಿಬಾಲ್ ಕ್ರೀಡೆಯ ಶ್ರೇಯಸ್ಸಿಗೆ ಮತ್ತಷ್ಟು ಶ್ರಮಿಸಬೇಕು ಎಂದು ಕರೆ ನೀಡಿದರಲ್ಲದೆ ಗ್ರಾಮೀಣ ಪ್ರದೇಶದಲ್ಲಿ ಈ ಆಟವನ್ನು ಮತ್ತಷ್ಟು ಖ್ಯಾತಿಗೊಳಿಸಲು ಕಾರ್ಯಕ್ರಮಗಳನ್ನು ರೂಪಿಸುವಂತೆ ಸಲಹೆ ನೀಡಿದರು.
ಸಭೆಯಲ್ಲಿ ವಾಲಿಬಾಲ್ ಅಸೋಸಿಯೇಷನ್ ವತಿಯಿಂದ ಹಲವು ಬೇಡಿಕೆಗಳನ್ನು ಶಾಸಕರ ಮಂದಿಟ್ಟರಲ್ಲದೆ ತಮ್ಮ ಅಸೋಸಿಯೇಷನ್ ವತಿಯಿಂದ ಕೈಗೊಳ್ಳಲಿರುವ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.
ಈ ಸಂದರ್ಭ ವೀರಾಜಪೇಟೆ ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷ ಮತೀನ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಪಕ್ಷದ ಮುಖಂಡರು ಅಂದಾಯಿ, ಮಂಜು ದೇವಯ್ಯ, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹಂಸ ಕೊಟ್ಟಮುಡಿ, ಆಯೂಬ್, ಇಸ್ಮಾಯಿಲ್ ಹಾಗೂ ವಾಲಿಬಾಲ್ ಅಸೋಸಿಯೇÃಷನ್ ಅಧ್ಯಕ್ಷರುಗಳೂ, ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.