ಚೆಟ್ಟಳ್ಳಿ, ಫೆ. ೧: ಸಬಲ್ ಯೋಜನೆಯಡಿ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ವನ್ನು ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿಂಧು ರಾಜನ್ ವಹಿಸಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಲ್ಪ ಬಿ.ಎಂ. ಅವರು ಸಬಲ್ ಯೋಜನೆಯ ಉದ್ದೇಶ ಹಾಗೂ ತರಬೇತಿ ಕಾರ್ಯಕ್ರಮದ ಮಹತ್ವದ ಕುರಿತು ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ತಂಗಮ್ಮ, ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಹಾಗೂ ಪಂಚಾಯಿತಿ ಸಿಬ್ಬಂದಿಯವರು ಹಾಜರಿದ್ದರು.