ಗೋಣಿಕೊಪ್ಪಲು, ಫೆ. ೧: ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಬದಲಾಯಿಸಿರುವುದನ್ನು ಖಂಡಿಸಿ ವಿವಿಧ ಗ್ರಾ.ಪಂ. ಅಧ್ಯಕ್ಷರುಗಳು ಫೆ. ೫ ರಂದು ಪೊನ್ನಂಪೇಟೆಯಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಬಡವರ ಹಾಗೂ ಅತೀ ಸಣ್ಣ ರೈತರ ಹಿತಕ್ಕಾಗಿ ಈ ಹಿಂದೆ ಮನ್‌ಮೋಹನಸಿಂಗ್ ಪ್ರಧಾನಮಂತ್ರಿ ಅಧಿಕಾರ ಅವಧಿಯಲ್ಲಿ ಉದ್ಯೋಗಖಾತ್ರಿ ಯೋಜನೆಯನ್ನು ಅನುಷ್ಠಾನಕ್ಕೆ ತರುವ ಮೂಲಕ, ದೇಶದ ಕೋಟ್ಯಂತರ ಕೂಲಿ ಕಾರ್ಮಿಕರಿಗೆ ಸಹಕಾರಿಯಾಗಿ ನೂರು ದಿನಗಳ ಕೂಲಿಯನ್ನು ಕಡ್ಡಾಯಗೊಳಿಸಿತ್ತು. ಇದರಿಂದ ಬಡ ಕುಟುಂಬಗಳು ತಮ್ಮ ಜೀವನವನ್ನು ಕಂಡುಕೊAಡಿದ್ದರು. ಅಲ್ಲದೆ ಅಭಿವೃದ್ದಿಗೆ ಒತ್ತು ನೀಡುವ ಮೂಲಕ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕಾಮಗಾರಿಗಳು ನಡೆದಿದ್ದವು ಎಂದು ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೊಲ್ಲಿರ ಬೋಪಣ್ಣ ಹಾಗೂ ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆಪಟ್ಟಿರ ಟಾಟೂ ಮೊಣ್ಣಪ್ಪ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಇವರು, ಈ ಮಹತ್ವಕಾಂಕ್ಷಿ ಯೋಜನೆಗೆ ಮಹಾತ್ಮ ಗಾಂಧೀಜಿಯವರ ಹೆಸರನ್ನು ನಾಮಕರಣ ಮಾಡಲಾಗಿತ್ತು. ಇದೀಗ ಈ ಯೋಜನೆಯಿಂದ ಮಹಾತ್ಮಗಾಂಧೀಜಿ ಹೆಸರನ್ನು ಕೈ ಬಿಡುವ ಮೂಲಕ ‘ಜಿ ರಾಮ್ ಜಿ’ ಹೆಸರನ್ನು ನಾಮಕರಣಗೊಳಿಸಿದೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ. ಅದಲ್ಲದೆ ನೂತನ ನಿಯಮ ಅವೈಜ್ಞಾನಿಕವಾಗಿದೆ ಎಂದರು. ಯುಪಿಎ ಸರ್ಕಾರದ ಯೋಜನೆಗೆ ಮಹಾತ್ಮಗಾಂಧೀಜಿಯವರ ಹೆಸರನ್ನೇ ಮುಂದುವರೆಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಆರಂಭಿಕ ಹಂತದಲ್ಲಿ ಪೊನ್ನಂಪೇಟೆಯ ಮಹಾತ್ಮಾ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ಪೊನ್ನಂಪೇಟೆ ತಾಲೂಕಿನ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು,ಸದಸ್ಯರುಗಳು ಮಾಜಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಸದಸ್ಯರುಗಳು ಸೇರಿದಂತೆ ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಕೇಂದ್ರದಿAದ ಬಿಡುಗಡೆಯಾಗುವ ೧೫ನೇ ಹಣಕಾಸು ಯೋಜನೆಯನ್ನು ಮೊದಲು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಅಣ್ಣಿರ ಹರೀಶ್, ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕುಲ್ಲಚಂಡ ಪ್ರಮೋದ್ ಉಪಸ್ಥಿತರಿದ್ದರು.