ಮಡಿಕೇರಿ, ಫೆ. ೨: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತುಗಳ ಮಾರಾಟ/ ಸರಬರಾಜು/ ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಜನವರಿ ತಿಂಗಳಿನಲ್ಲಿ ಒಟ್ಟು ೬೩ ಪ್ರಕರಣಗಳನ್ನು ಎನ್‌ಡಿಪಿಎಸ್ ಆ್ಯಕ್ಟ್ ಅಡಿಯಲ್ಲಿ ದಾಖಲಿಸಲಾಗಿದೆ. ಇದರಲ್ಲಿ ೯ ಗಾಂಜಾ ಸರಬರಾಜು, ೫೪ ಗಾಂಜಾಸೇವನೆ ಪ್ರಕರಣಗಳು ಸೇರಿದ್ದು, ೨.೬೯೨ ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ಬಿಂದುಮಣಿ ಮಾಹಿತಿ ನೀಡಿದ್ದಾರೆ.