ಕೆ.ಎಂ ಇಸ್ಮಾಯಿಲ್ ಕಂಡಕರೆ
ಮಡಿಕೇರಿ, ಫೆ. ೩: ಕುಟುಂಬದ ವಾರ್ಷಿಕ ಆದಾಯ ನಿಗದಿಗಿಂತ ಹೆಚ್ಚಾಗಿದ್ದರೂ ಮಾನದಂಡಗಳನ್ನು ಉಲ್ಲಂಘಿಸಿ ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿರುವ) ಕಾರ್ಡ್ಗಳನ್ನು ಪಡೆದಿದ್ದ ಕೊಡಗು ಜಿಲ್ಲೆಯ ೪,೫೧೨ ಕುಟುಂಬಗಳ ಬಿಪಿಎಲ್ ಕಾರ್ಡ್ಗಳನ್ನು ಎಪಿಎಲ್ಗೆ(ಆದ್ಯತಾ ರಹಿತ ಕುಟುಂಬ-ಎನ್.ಪಿಎಚ್.ಎಚ್) ವರ್ಗಾಯಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ೨೦೨೫ರ ಸೆಪ್ಟೆಂಬರ್ ತಿಂಗಳನಿAದ ಎರಡು ತಿಂಗಳ ಕಾಲ ನಡೆದ ಪಡಿತರ ಚೀಟಿ ಪರಿಷ್ಕರಣಾ ಚೀಟಿ ಕಾರ್ಯದಲ್ಲಿ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲಾಗಿದೆ. ವಾರ್ಷಿಕವಾಗಿ ರೂ.೧.೨೦ ಲಕ್ಷಕ್ಕಿಂತ ಹೆಚ್ಚು ಆದಾಯವಿರುವ, ಜಿ.ಎಸ್.ಟಿ, ಕಂಪನಿ ತೆರಿಗೆ ಪಾವತಿಸುತ್ತಿರುವ ಆಧಾರದ ಮೇಲೆ ಕಾರ್ಡ್ಗಳ ಪರಿವರ್ತನೆಗೆ ಆಹಾರ ಇಲಾಖಾ ಅಧಿಕಾರಿಗಳು ಕ್ರಮ ವಹಿಸಿದ್ದಾರೆ.
ಕೊಡಗು ಜಿಲ್ಲೆಯಾದ್ಯಂತ ನಡೆದ ಪಡಿತರ ಚೀಟಿ ಪರಿಷ್ಕರಣಾ ಕಾರ್ಯದಲ್ಲಿ ಒಟ್ಟು ೪,೮೬೯ ಕುಟುಂಬಗಳು ನಿಯಮ ಉಲ್ಲಂಘಿಸಿ ಬಿಪಿಎಲ್ ಕಾರ್ಡ್ ಪಡೆದಿರುವುದು ಪತ್ತೆಯಾಗಿತ್ತು. ಅದರಲ್ಲಿ ೪,೫೧೨ ಬಿಪಿಎಲ್ ಕಾರ್ಡ್ಗಳು ಇದೀಗ ಎಪಿಎಲ್ಗೆ ಬದಲಾಯಿಸಲಾಗಿದೆ. ಉಳಿದ ೩೫೭ ಬಿಪಿಎಲ್ ಕಾರ್ಡ್ ಕುಟುಂಬಗಳ ದಾಖಲೆಗಳ ಪರಿಶೀಲನಾ ಕಾರ್ಯ ನಡೆಯುತ್ತಿದೆ. ಆಹಾರ ಇಲಾಖಾ ಅಧಿಕಾರಿಗಳು ಕೊಡಗು ಜಿಲ್ಲೆಯಾದ್ಯಂತ ಪಡಿತರ ಚೀಟಿ ಪರಿಷ್ಕರಣೆ ಮತ್ತು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಮಡಿಕೇರಿ ತಾಲೂಕಿನ ೯೩೬, ಸೋಮವಾರಪೇಟೆಯ ೧,೦೨೬, ವೀರಾಜಪೇಟೆ ೯೯೩, ಕುಶಾಲನಗರದ ೧,೧೩೮ ಹಾಗೂ ಪೊನ್ನಂಪೇಟೆ ತಾಲೂಕಿನಲ್ಲಿ ೭೪೯ ಬಿಪಿಎಲ್ ಕಾರ್ಡ್ಗಳು ಅನರ್ಹರ ಪಾಲಾಗಿತ್ತು.
೨೦೨೫ರ ಡಿಸೆಂಬರ್ ತಿಂಗಳ ಅಂತ್ಯಕ್ಕೆ ಮಡಿಕೇರಿ ತಾಲೂಕಿನಲ್ಲಿ ೯೩೬, ಸೋಮವಾರಪೇಟೆ ೯೩೬, ವೀರಾಜಪೇಟೆ ೮೮೩, ಕುಶಾಲನಗರದ ೧೦೫೦, ಹಾಗೂ ಪೊನ್ನಂಪೇಟೆ ತಾಲೂಕಿನಲ್ಲಿ ೭೦೭ ಕುಟುಂಬಗಳ ಬಿಪಿಎಲ್ ಕಾರ್ಡ್ಗಳನ್ನು ಎಪಿಎಲ್ ಕಾರ್ಡ್ಗಳಾಗಿ ಬದಲಾಯಿಸಲಾಗಿದೆ.
ಪ್ರಸ್ತುತ ಕೊಡಗು ಜಿಲ್ಲೆಯಲ್ಲಿ ೯,೦೧೯(ಎಎವೈ), ೯೯,೪೦೫ (ಬಿಪಿಎಲ್) ಹಾಗೂ ೩೯,೧೪೭(ಎಪಿಎಲ್) ಕಾರ್ಡ್ಗಳು ಸೇರಿ ಒಟ್ಟು ೧,೪೭,೫೭೧ ಪಡಿತರ ಚೀಟಿಗಳಿವೆ.
ಮಾನದಂಡಗಳೇನು..?
ಸಾರ್ವಜನಿಕ ಪಡಿತರ ವಿತರಣಾ ಪದ್ಧತಿಯಡಿ ಆದ್ಯತೇತರ ಕುಟುಂಬಗಳನ್ನು (ಎಪಿಎಲ್) ಗುರುತಿಸಲು, ಪ್ರಸ್ತುತ ಇರುವ ಮಾನದಂಡಗಳನ್ನು ಅನುಸರಿಸಲಾಗಿದೆ. ಅನರ್ಹರು ಪಡೆದಿದ್ದ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್ಗಳನ್ನು ಈ ಮಾನದಂಡಗಳ ಅನುಸಾರ ಪತ್ತೆ ಮಾಡಲಾಗಿದೆ. ಕುಟುಂಬದ ವಾರ್ಷಿಕ ಆದಾಯ ರೂ.೧.೨೦ ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು, ಸರಕಾರದ ಅಥವಾ ಸರಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರಕಾರಿ ಪ್ರಾಯೋಜಿತ, ಸರಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡAತೆ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಆದಾಯ ತೆರಿಗೆ, ಸೇವಾ ತೆರಿಗೆ, ವೃತ್ತಿ ತೆರಿಗೆ ಪಾವತಿಸುವ ಎಲ್ಲ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ ೩ ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಎಪಿಎಲ್ ಕುಟುಂಬಗಳಾಗಿರಲಿವೆ. ನಗರ ಪ್ರದೇಶಗಳಲ್ಲಿ ಒಂದು ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿ ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನ ಹೊಂದಿರುವ ಎಲ್ಲ ಕುಟುಂಬಗಳನ್ನು ಎಪಿಎಲ್ ಪಟ್ಟಿಗೆ ಸೇರಿಸಲಾಗಿದೆ.