ಗೋಣಿಕೊಪ್ಪಲು, ಫೆ. ೩: ಗೋಣಿಕೊಪ್ಪ ಉಮಾಮಹೇಶ್ವರಿ ದೇವಾಲಯದ ಮುಂಭಾಗದಿAದ ಪೊನ್ನಂಪೇಟೆಯ ಮಹಾತ್ಮಗಾಂಧಿ ಪ್ರತಿಮೆವರೆಗೆ ತಾ. ೫ ರಂದು (ನಾಳೆ) ಬೆಳಿಗ್ಗೆ ೧೦ ಗಂಟೆಗೆ ಕೊಡಗು ಜಿಲ್ಲಾ ಕಾಂಗ್ರೆಸ್, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಾದಯಾತ್ರೆ ನಡೆಯಲಿದೆ. ಅಲ್ಲದೆ ಗಾಂಧಿ ಪ್ರತಿಮೆ ಬಳಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಕಾರ್ಯದರ್ಶಿ ಎ.ಜೆ. ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಡವರ ಹಾಗೂ ಅತೀ ಸಣ್ಣ ರೈತರ ಹಿತಕ್ಕಾಗಿ ಈ ಹಿಂದೆ ಮನ್‌ಮೋಹನ್ ಸಿಂಗ್ ಪ್ರಧಾನಮಂತ್ರಿ ಆಗಿದ್ದ ಅವಧಿಯಲ್ಲಿ ರಾಷ್ಟಿçÃಯ ಉದ್ಯೋಗಖಾತ್ರಿ ಯೋಜನೆಯನ್ನು ಅನುಷ್ಠಾನಕ್ಕೆ ತಂದು ದೇಶದ ಕೋಟ್ಯಂತರ ಕೂಲಿ ಕಾರ್ಮಿಕರಿಗೆ ಸಹಕಾರಿಯಾಗಿ ನೂರು ದಿನಗಳ ಕೂಲಿಯನ್ನು ಕಡ್ಡಾಯಗೊಳಿಸಲಾಗಿತ್ತು.

ಈ ಮಹತ್ವಕಾಂಕ್ಷಿ ಯೋಜನೆ ಭಾರತಕ್ಕೆ ಸ್ವಾತಂತ್ರö್ಯವನ್ನು ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಹಾತ್ಮ ಗಾಂಧೀಜಿಯವರ ಹೆಸರನ್ನು ನಾಮಕರಣ ಮಾಡಲಾಗಿತ್ತು. ಇದೀಗ ಈ ಯೋಜನೆಯಿಂದ ಮಹಾತ್ಮ ಗಾಂಧೀಜಿಯವರ ಹೆಸರನ್ನು ಕೇಂದ್ರ ಸರ್ಕಾರವು ಕೈಬಿಡುವ ಮೂಲಕ ‘ಜಿ ರಾಮ್ ಜಿ’ ಹೆಸರನ್ನು ನಾಮಕರಣಗೊಳಿಸಿದೆ. ಇದನ್ನು ಖಂಡಿಸಿ ಕಾಂಗ್ರೆಸ್ ಪಕ್ಷವು ಬೃಹತ್ ಪಾದಯಾತ್ರೆಯನ್ನು ಕೈಗೊಂಡಿದೆ.

ಪಾದಯಾತ್ರೆಯಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ, ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಮಾಜಿ ಎಂಎಲ್‌ಸಿ ವೀಣಾ ಅಚ್ಚಯ್ಯ, ಕೆಪಿಸಿಸಿಯ ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ವಲಯ ಕಾಂಗ್ರೆಸ್ ಹಾಗೂ ಬೂತ್ ಮಟ್ಟದ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.