ಮಡಿಕೇರಿ, ಫೆ. ೩: ಅಲ್ಲಾರಂಡ ರಂಗಚಾವಡಿ, ಸಿರಿಗನ್ನಡ ವೇದಿಕೆ, ಚಕೋರ ಕೊಡಗು, ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಹೊರತಂದಿರುವ ಅಲ್ಲಾರಂಡ ವಿಠಲ ನಂಜಪ್ಪ ಅವರು ರಚಿಸಿರುವ ಬಹರೂಪಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ತಾ. ೫ ರಂದು ನಡೆಯಲಿದೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲೇಖಕ ಅಲ್ಲಾರಂಡ ವಿಠಲ ನಂಜಪ್ಪ, ಅಂದು ಬೆಳಿಗ್ಗೆ ೧೦ ಗಂಟೆಗೆ ಮಡಿಕೇರಿಯ ಗಾಂಧಿ ಭವನದಲ್ಲಿ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಮನೆಯಪಂಡ ಎ ಪೊನ್ನಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಾಹಿತಿ, ವಿಚಾರವಾದಿ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ವೀರಾಜಪೇಟೆ ಶಾಸಕ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಜೆಸಿಐ ರಾಷ್ಟಿçÃಯ ಅಧ್ಯಕ್ಷ ಎ.ಎಸ್. ನರೇನ್ ಕಾರ್ಯಪ್ಪ, ವಕೀಲ, ಸಾಹಿತಿ ಕೆ.ಪಿ. ಬಾಲಸುಬ್ರಮಣ್ಯ ಕಂಜರ್ಪಣೆ, ಬ್ರಹ್ಮಗಿರಿ ವಾರಪತ್ರಿಕೆ ಸಂಪಾದಕ ಉಳ್ಳಿಯಡ ಎಂ ಪೂವಯ್ಯ, ಭಾಗವಹಿಸಲಿದ್ದಾರೆ. ಪುಸ್ತಕ ಕುರಿತು ವಕೀಲ, ಪತ್ರಕರ್ತ ಬಿ.ಆರ್. ರಂಗಸ್ವಾಮಿ, ಮಂಗಳೂರು ವಿಶ್ವವಿದ್ಯಾನಿಲಯದ ಸಂಸ್ಕೃತಿ ಚಿಂತಕ ಪ್ರೊ. ಟಿ. ರಂಗಪ್ಪ ಪಾಲ್ಗೊಳ್ಳಲಿದ್ದಾರೆ ಎಂದರು.
ಇದೇ ಸಂದರ್ಭ ಶಿಕ್ಷಣ ಕ್ಷೇತ್ರದ ಸಾಧನೆಗೆ ನಿವೃತ್ತ ಪ್ರಾಂಶುಪಾಲೆ ಕಲ್ಲುಮಾಡಂಡ ಸರಸ್ವತಿ, ಕೊಡವ ತಕ್ಕ್ ಎಳ್ತ್ಕಾರಡ ಕೂಟದ ಸ್ಥಾಪಕ ಅಧ್ಯಕ್ಷ ಚೆಂಬಾAಡ ಶಿವಿ ಭೀಮಯ್ಯ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ಶ್ರೀ ಕೃಷ್ಣ ಕಂಪ್ಯೂರ‍್ಸ್ ಮಾಲೀಕ ಉಣ್ಣಿಕೃಷ್ಣ ಅವರನ್ನು ಸನ್ಮಾನಿಸಲಾಗುವುದು ಎಂದು ವಿವರಿಸಿದರು.
ಬಹುರೂಪಿ ಪುಸ್ತಕ ತಾನು ಬರೆದ ಅಂಕಣಗಳ ಸಂಗ್ರಹವಾಗಿದ್ದು, ಎ.ಕೆ. ಸುಬ್ಬಯ್ಯ ಅವರು ಮುನ್ನುಡಿ ಬರೆದಿದ್ದರು. ಈ ಪುಸ್ತಕವನ್ನು ಅವರಿಗೆ ಅರ್ಪಿಸಲಾಗಿದೆ ಎಂದು ವಿಠಲ ನಂಜಪ್ಪ ಹೇಳಿದರು.
ಗೋಷ್ಠಿಯಲ್ಲಿ ಮಡಿಕೇರಿ ತಾಲೂಕು ಗಿರಿಜನ ಸಹಕಾರ ಸಂಘದ ಅಧ್ಯಕ್ಷ ಮಿಟ್ಟು ರಂಜಿತ್, ಮಾಜಿ ಸೈನಿಕ ಬೊಳ್ಳಿಯಂಡ ಗಣೇಶ್ ಹಾಜರಿದ್ದರು.