ಕೂಡಿಗೆ, ಫೆ. ೩: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆ ಕೂಡಿಗೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ರೂ. ೧೦ ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಶಾಸಕ ಮಂತರ್ ಗೌಡ, ಈ ಸಾಲಿನಲ್ಲಿ ಮಡಿಕೇರಿ ಕ್ಷೇತ್ರ ವ್ಯಾಪ್ತಿಯ ಅನೇಕ ಗ್ರಾಮಗಳಿಗೆ ಸಂಪರ್ಕ ರಸ್ತೆಯನ್ನು ನಿರ್ಮಾಣ ಗೊಳಿಸಲಾಗಿದ್ದು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ಯನ್ನು ನೀಡಲಾಗುವುದು ಎಂದರು.

ಈ ಸಂದರ್ಭ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಅರುಣ್ ರಾವ್, ಅನಂತ, ಶಿವಕುಮಾರ್, ಶ್ರೀ ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎಸ್. ಚಂದ್ರು, ಕೆ.ಪಿ.ಸಿ.ಸಿ. ಸದಸ್ಯ ಹೆಬ್ಬಾಲೆ ನಟೇಶ್ ಗೌಡ, ಕೂಡಿಗೆ ದೇವಾಲಯ ಸಮಿತಿ ನಿರ್ದೇಶಕ ಮಲ್ಲೇಶ್ (ರಂಗ), ಕೆ.ಟಿ. ವೆಂಕಟೇಶ್ ಹಾಜರಿದ್ದರು.