ಕುಶಾಲನಗರ: ಕುಶಾಲನಗರ ತಾಲೂಕು ರಾಷ್ಟಿçÃಯ ಹಬ್ಬ ಆಚರಣಾ ಸಮಿತಿಯ ಆಶ್ರಯದಲ್ಲಿ ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದ ಸಂದರ್ಭ ತಾಲೂಕು ತಹಶೀಲ್ದಾರ್ ಹಾಗೂ ಕುಶಾಲನಗರ ತಾಲೂಕು ರಾಷ್ಟಿçÃಯ ಹಬ್ಬ ಆಚರಣಾ ಸಮಿತಿಯ ಅಧ್ಯಕ್ಷರೂ ಆಗಿರುವ ಕಿರಣ್ ಜಿ. ಗೌರಯ್ಯ ಅವರನ್ನು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಪರವಾಗಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್, ಕುಶಾಲನಗರ ಡಿ.ವೈ.ಎಸ್.ಪಿ. ಚಂದ್ರಶೇಖರ್, ಪುರಸಭೆ ಮುಖ್ಯ ಅಧಿಕಾರಿ ಟಿ.ಎಸ್. ಗಿರೀಶ್, ಪೊಲೀಸ್ ವೃತ್ತ ನಿರೀಕ್ಷಕ ಪ್ರದೀಪ್ ಬಿ.ಆರ್., ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಮತ್ತು ಸದಸ್ಯರುಗಳು ಇದ್ದರು.

ಶ್ರೀಮಂಗಲ: ಪೊನ್ನಂಪೇಟೆ ತಾಲೂಕು ಟಿ. ಶೆಟ್ಟಿಗೇರಿಯ ಮಾಯಣಮಾಡ ಮಂದಯ್ಯ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಜಿಲ್ಲಾ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದ ಸಂಜನಾ ಹೆಚ್.ಟಿ. ಅವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭ ಟಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಎಸ್.ಡಿ.ಎಂ.ಸಿ. ಅಧ್ಯಕ್ಷರು, ಸದಸ್ಯರು, ಪೋಷಕರು, ಮುಖ್ಯ ಶಿಕ್ಷಕರು, ಸಹಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಶನಿವಾರಸಂತೆ: ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಶಾಲಾ-ಕಾಲೇಜುಗಳ ವತಿಯಿಂದ ಗಣರಾಜ್ಯೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು.

ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಶಂಭುಲಿAಗಪ್ಪ ಧ್ವಜಾರೋಹಣ ನೆರವೇರಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಶಿಕ್ಷಕ ಅಬ್ದುಲ್ ರಬ್ ಮಾತನಾಡಿ, ವಿಶ್ವದಲ್ಲೆ ಮಾನ್ಯತೆ ಪಡೆದ ಭಾರತದ ಸಂವಿಧಾನ ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ. ಸಂವಿಧಾನದ ರೀತಿ ದೇಶದ ಪ್ರಗತಿ, ಸುಭಿಕ್ಷತೆ, ರಾಷ್ಟç ರಕ್ಷಣೆ ಪ್ರಜೆಗಳಾದ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಸAಸ್ಥೆಯ ಖಜಾಂಚಿ ಡಾ.ಉದಯಕುಮಾರ್ ಹಾಗೂ ನಿರ್ದೇಶಕ ಬಿ.ಕೆ. ಯತೀಶ್ ದಿನದ ಮಹತ್ವದ ಕುರಿತು ಮಾತನಾಡಿದರು. ಪ.ಪೂ.ಕಾಲೇಜಿನ ಪ್ರಾಂಶುಪಾಲ ಸೋಮಶೇಖರಪ್ಪ, ಪದವಿ ಕಾಲೇಜಿನ ಪ್ರಬಾರ ಪ್ರಾಂಶುಪಾಲ ಅಭಿಲಾಷ್, ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ ಹಾಜರಿದ್ದರು. ಉಪನ್ಯಾಸಕ ಸತೀಶ್ ಕಾರ್ಯಕ್ರಮ ನಿರೂಪಿಸಿದರು.