ಕೂಡಿಗೆ, ಫೆ. ೩: ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಿಂಪಡೆಯುವ ಹಾಗೂ ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಕಸಿತ್ ಭಾರತ್ - ಗ್ಯಾರಂಟಿ ಯೋಜಗಾರ್ ಮತ್ತು ಅಜೀವಿಕಾ ಮಿಷನ್ ಯೋಜನೆಗಳ ಕುರಿತು ಸಮಗ್ರವಾಗಿ ಚರ್ಚಿಸುವ ವಿಶೇಷ ಗ್ರಾಮ ಸಭೆಯು ಕೂಡುಮಂಗಳೂರು ಗ್ರಾಮ ಪಂಚಾಯಿತಿಯಲ್ಲಿ ನಡೆಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲ್ಲಿ ಹಾಜರಿದ್ದ ಗ್ರಾಮಸ್ಥರು ವಿಷಯಕ್ಕೆ ಸಂಬAಧಿಸಿದAತೆ ಹಲವಾರು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಅಭಿವೃದ್ಧಿ ಅಧಿಕಾರಿ ಸಂತೋಷ್, ಕಾರ್ಯದರ್ಶಿ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.