ಕೂಡಿಗೆ, ಫೆ. ೩: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಗ್ರಾಮದಲ್ಲಿ ರೂ. ೨೫ ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ನೆರವೇರಿಸಿದರು. ಗ್ರಾಮಸ್ಥರ ಬೇಡಿಕೆ ಮೇರೆಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿಗೆ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕಾಂಗ್ರೆಸ್ ಮುಖಂಡರಾದ ಕೆ.ಕೆ. ಮಂಜುನಾಥ್, ಕೆ.ಇ. ಈರಪ್ಪ, ಲೋಕೇಶ್, ಸುರೇಶ್, ಗಿರೀಶ್, ಜವರಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಕೆ.ಬಿ. ಷಂಶುದ್ದೀನ್, ಅಭಿವೃದ್ಧಿ ಅಧಿಕಾರಿ ಸಂತೋಷ್, ಗ್ರಾಮದ ಪ್ರಮುಖರು, ಗ್ರಾಮಸ್ಥರು ಇದ್ದರು.