ಪೊನ್ನಂಪೇಟೆ, ಫೆ. ೪: ಪೊನ್ನಂಪೇಟೆ ತಾಲೂಕಿನ ಬಾಳೆಲೆ ಗ್ರಾಮದ ಪ್ರತಿಭಾ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಪ್ರತಿಭಾ ಹಬ್ಬ ಸಂಭ್ರಮದಿAದ ನಡೆಯಿತು.
ಶಾಲಾ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಗೋಣಿಕೊಪ್ಪಲು ಪೊಲೀಸ್ ವೃತ್ತ ನಿರೀಕ್ಷಕ ಶಿವರಾಜ್ ಆರ್. ಮುಧೋಳ್ ಹಾಗೂ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷರು ಹಾಗೂ ಉದ್ಯಮಿ ಚೆರಿಯಪಂಡ ಸುರೇಶ್ ನಂಜಪ್ಪ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪೊಲೀಸ್ ವೃತ್ತ ನಿರೀಕ್ಷಕ ಶಿವರಾಜ್ ಆರ್. ಮುಧೋಳ್ ಅವರು, ಮಕ್ಕಳಿಗೆ ಚಿಕ್ಕಂದಿನಿAದಲೇ ಪೋಷಕರು ಉತ್ತಮ ಸಂಸ್ಕಾರ, ಜೀವನ ಮೌಲ್ಯಗಳನ್ನು ಕಲಿಸಿಕೊಡಬೇಕು. ಹಾಗೆಯೇ ಕೆಟ್ಟದ್ದನ್ನು ಪ್ರತಿರೋಧಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ತುಂಬಬೇಕು ಎಂದರು.
ಚೆರಿಯಪAಡ ಸುರೇಶ್ ನಂಜಪ್ಪ ಮಾತನಾಡಿ, ಶಿಕ್ಷಣ ಸಂಸ್ಥೆ ಬೆಳೆಯಬೇಕೆಂದರೆ ಪೋಷಕರು ಕೈಜೋಡಿಸಬೇಕು. ಬೆಂಗಳೂರು ಕೊಡವ ಸಮಾಜದ ಆಡಳಿತ ಮಂಡಳಿ ವತಿಯಿಂದ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಪ್ರತಿಭಾ ವಿದ್ಯಾಸಂಸ್ಥೆಯ ಮುಖ್ಯಸ್ಥ ಆಲೆಮಾಡ ಎಸ್. ಅಯ್ಯಪ್ಪ ಮಾತನಾಡಿ, ಶಾಲೆಯು ಆರಂಭವಾಗಿ ೪೬ ವರ್ಷ ಕಳೆದಿದ್ದು, ಉತ್ತಮ ಶಿಕ್ಷಣ ನೀಡುತ್ತಿರುವುದು ಹೆಮ್ಮೆಯ ವಿಚಾರ. ಸಮಾಜಕ್ಕೆ ಪ್ರೇರಣೆಯಾಗು ವಂತೆ ಶಾಲೆ ಯನ್ನು ಮುನ್ನೆಡೆಸಿಕೊಂಡು ಹೋಗಬೇಕೆಂಬ ಉದ್ದೇಶ ಹೊಂದಿದ್ದೇವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥೆ ಡಾ. ಆಲೆಮಾಡ ಕಾವೇರಮ್ಮ ಅಯ್ಯಪ್ಪ ಮಾತನಾಡಿ, ವಿದ್ಯೆ ಕೇವಲ ಪುಸ್ತಕದಿಂದ ಮಾತ್ರ ದೊರೆಯುವುದಿಲ್ಲ. ಈ ಕಾರಣದಿಂದಲೇ ಸಂಸ್ಥೆಯಲ್ಲಿ ವಿದ್ಯೆಯೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು. ವಿವಿಧ ವಿಭಾಗಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಿಸಿದರು. ಶಾಲೆಯಲ್ಲಿ ತರಬೇತಿ ಪಡೆದ ಆಯ್ದ ವಿದ್ಯಾರ್ಥಿಗಳಿಂದ ಕರಾಟೆ ಮತ್ತು ಡಂಬಲ್ಸ್ ಪ್ರದರ್ಶನ ಪೋಷಕರ ಹಾಗೂ ಸಾರ್ವಜನಿಕರ ಗಮನ ಸೆಳೆಯಿತು. ವಾರ್ಷಿಕೋತ್ಸವದ ಅಂಗವಾಗಿ ಶಾಲಾ ವಿದ್ಯಾರ್ಥಿಗಳು ಪ್ರದರ್ಶಿಸಿದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದಿದ್ದವರ ಗಮನ ಸೆಳೆಯಿತು.
ಶಾಲಾ ಮುಖ್ಯ ಶಿಕ್ಷಕಿ ಗೀತಾ ನಾಯ್ಡು ಸ್ವಾಗತಿಸಿ, ಶಾಲಾ ವಾರ್ಷಿಕ ವರದಿ ಮಂಡಿಸಿ, ಕಾರ್ಯಕ್ರಮ ನಿರೂಪಿಸಿದರು. ಶಾಲಾ ಸಹ ಶಿಕ್ಷಕಿಯರಾದ ಶ್ರುತಿ, ರಮ್ಯಾ, ಅಯ್ಯಪ್ಪ, ಮುತ್ತಮ್ಮ, ಸಹಾಯಕಿ ರಾಧಾ, ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.