ಶನಿವಾರಸAತೆ, ಫೆ.೪ : ಜಿಲ್ಲಾಡಳಿತ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗ ಹಾಗೂ ಶನಿವಾರಸಂತೆ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ನಿರ್ಮಾಣಗೊಂಡ ನೂತನ ಶನಿವಾರಸಂತೆ ಬಸ್ ನಿಲ್ದಾಣ ತಾ.೭ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಸಾರ್ವಜನಿಕರ ಸೇವೆಗೆ ಲೋಕಾರ್ಪಣೆಗೊಳ್ಳಲಿದೆ.

ನೂತನ ಬಸ್ ನಿಲ್ದಾಣ ಉದ್ಘಾಟನಾ ಸಮಾರಂಭವನ್ನು ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜ್ ಉದ್ಘಾಟಿಸುವರು. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಉಪಸ್ಥಿತರಿರುವರು. ವಿಶೇಷ ಗಣ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಹಾಗೂ ಗುಬ್ಬಿ ವಿಧಾನ ಸಭಾಕ್ಷೇತ್ರದ ಶಾಸಕ ಎಸ್.ಆರ್.ಶ್ರೀ ನಿವಾಸ್ ಪಾಲ್ಗೊಳ್ಳುವರು.

ಸಮಾರಂಭದ ಅಧ್ಯಕ್ಷತೆಯನ್ನು ಮಡಿಕೇರಿ ವಿಧಾನ ಸಭಾಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ವಹಿಸುವರು. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಮೈಸೂರು ಲೋಕ ಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್.ಅರುಣ್ ಮಾಚಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಟಿ.ಎಂ. ಧರ್ಮಜ ಉತ್ತಪ್ಪ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಎಂ.ಕಾAತರಾಜ್, ಕೊಡಗು ಜಿಲ್ಲಾ ಪಂಚಾಯತ್ ಕಾರ್ಯದರ್ಶಿ, ಸಾರಿಗೆ ಇಲಾಖೆ ಆಡಳಿತಾಧಿಕಾರಿ ಡಾ.ಎನ್.ವಿ.ಪ್ರಸಾದ್ ಹಾಗೂ ವಿಶೇಷ ಆಹ್ವಾನಿತರಾಗಿ ಕ.ರಾ.ರ.ಸಾ.ನಿ.ದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ನಿರ್ದೇಶಕಿ ಡಾ.ನಂದಿನಿದೇವಿ, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್‌ಪ್ರಕಾಶ್ ಮೀನಾ ಪಾಲ್ಗೊಳ್ಳುವರು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಪಿ. ಶ್ರೀಹರಿಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.