ಸೋಮವಾರಪೇಟೆ, ಫೆ. ೪: ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಂಡು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ಜೇಸೀ ಸಂಸ್ಥೆಯು ಉತ್ತಮ ವೇದಿಕೆಯಾಗಿದೆ ಎಂದು ವಲಯ ೧೪ರ ಅಧ್ಯಕ್ಷ ಪ್ರಜ್ವಲ್ ಎಸ್. ಜೈನ್ ಅಭಿಪ್ರಾಯಿಸಿದರು. ಇಲ್ಲಿನ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆದ ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ಸಂಸ್ಥೆಯ ೨೦೨೬ನೇ ಸಾಲಿನ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ, ನೂತನ ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಅವರು ಮಾತನಾಡಿದರು.
ವಿಶ್ವದಾದ್ಯಂತ ಸೇವಾ ಕಾರ್ಯವನ್ನು ನಡೆಸುತ್ತಿರುವ ಜೇಸೀ ಸಂಸ್ಥೆಯು ಯುವ ಜನಾಂಗದ ಅಭ್ಯುದಯಕ್ಕೆ ಶ್ರಮಿಸುತ್ತಿದೆ. ಸಮಾಜದ ವಿವಿಧ ಸ್ತರಗಳಲ್ಲಿ ತನ್ನ ಸೇವಾ ಕಾರ್ಯವನ್ನು ವಿಸ್ತರಿಸಿಕೊಂಡಿದೆ ಎಂದರು. ಕಾರ್ಯಕ್ರಮದಲ್ಲಿ ಜೇಸೀ ವಲಯ ಉಪಾಧ್ಯಕ್ಷ ಬಿ.ಎಂ. ಜಗತ್, ನಿಕಟಪೂರ್ವ ಅಧ್ಯಕ್ಷೆ ಜಗದಾಂಬ ಗುರುಪ್ರಸಾದ್ ಇದ್ದರು. ನೂತನ ಸಾಲಿನ ಅಧ್ಯಕ್ಷೆಯಾಗಿ ಆಯ್ಕೆಯಾದ ಮಂಜುಳಾ ಸುಬ್ರಮಣಿ, ಪ್ರಧಾನ ಕಾರ್ಯದರ್ಶಿ ಜ್ಯೋತಿ ರಾಜೇಶ್, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಜ, ಜೂನಿಯರ್ ಜೇಸಿ ಅಧ್ಯಕ್ಷೆ ಭಾವನ್ಯ ಸೇರಿದಂತೆ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.