ಮಡಿಕೇರಿ, ಫೆ.೪: ಕೊಡಗು ಜಿಲ್ಲಾಡಳಿತ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಕೊಡಗು ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ, ದಿಶಾ ಭೋದ್ ಫೌಂಡೇಶನ್ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿದ್ಯವಿದ್ಯಾನಿಲಯ ಸೇರಿದಂತೆ ಕಾಲೇಜುಗಳ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನಶಾ ಮುಕ್ತ ಭಾರತ-ಸ್ವಾಸ್ಥö್ಯ ಭಾರತ ಹಾಗೂ ಅಂಗಾAಗ ದಾನ ಅಭಿಯಾನ (ಜೀವ ಸಾರ್ಥಕತೆ ಅಭಿಯಾನ) ಮತ್ತು ಜಾಥ ಕಾರ್ಯಕ್ರಮವು ತಾ. ೭ ರಂದು ಮಡಿಕೇರಿ ನಗರದಲ್ಲಿ ನಡೆಯಲಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಎ.ಜೆ. ಲೋಕೇಶ್ ತಿಳಿಸಿದ್ದಾರೆ. ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀಕ್ಷಕರ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ತಾ.೭ ರಂದು ಬೆಳಗ್ಗೆ ೭ ಗಂಟೆಗೆ ನಗರದ ಗಾಂಧಿ ಮೈದಾನದಿಂದ ಜಾಥ ಹೊರಡಲಿದ್ದು, ಮಂಗೇರಿರ ಮುತ್ತಣ್ಣ ವೃತ್ತ, ಜನರಲ್ ತಿಮ್ಮಯ್ಯ ವೃತ್ತ, ಅಜ್ಜಮಾಡ ಬಿ.ದೇವಯ್ಯ ವೃತ್ತದ ಮೂಲಕ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣಕ್ಕೆ ತೆರಳಲಿದೆ. ಈ ಸಂದರ್ಭದಲ್ಲಿ ಬೀದಿನಾಟಕ ಪ್ರದರ್ಶನ ನಡೆಸಿ, ನಶಾ ಮುಕ್ತ ಭಾರತ ನಿರ್ಮಾಣ ಮಾಡುವಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು. ನಶಾ ಮುಕ್ತ ಭಾರತ ಸಂಬAಧ ಹೆಚ್ಚಿನ ಅರಿವು ಮೂಡಿಸುವಲ್ಲಿ ಪ್ಲೇ ಕಾರ್ಡ್ ಪ್ರದರ್ಶನ ಸೇರಿದಂತೆ ವಿವಿಧ ೪ಆರನೇ ಪುಟಕ್ಕೆ
(ಮೊದಲ ಪುಟದಿಂದ) ಮಾಧ್ಯಮಗಳ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ.
ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ಕೆಟ್ಟ ಪರಿಣಾಮ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಆ ದಿಸೆಯಲ್ಲಿ ಅಭಿಯಾನದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿಗಳು, ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳು ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.
ಸ್ಥಾನಿಕ ವೈದ್ಯಾಧಿಕಾರಿ ಡಾ.ಧನಂಜಯ ಅವರು ಮಾತನಾಡಿ ಅಂಗಾAಗ ದಾನ ಮಹತ್ವದ ಕುರಿತು ಜಾಗೃತಿ ಅಭಿಯಾನವನ್ನು ಇದೇ ಸಂದರ್ಭ ಹಮ್ಮಿಕೊಳ್ಳಲಾಗಿದೆ ಎಂದರು. ಅಂಗಾAಗ ದಾನ ಮಾಡುವುದರಿಂದ ಇತರರ ಜೀವವನ್ನು ಉಳಿಸಬಹುದಾಗಿದೆ. ನಿಟ್ಟಿನಲ್ಲಿ ಅರಿವು ಮೂಡಿಸಲು ಪ್ರಯತ್ನಿಸಲಾಗಿದೆ.
ಡಾ. ಮೋಹನ್ ಅಪ್ಪಾಜಿ ಮಾತನಾಡಿ, ನಶಾ ಮುಕ್ತ ಭಾರತ-ಸ್ವಾಸ್ಥö್ಯ ಭಾರತ, ಅಂಗಾAಗ ದಾನ ಅಭಿಯಾನದಲ್ಲಿ ಲಯನ್ಸ್ ಸಂಸ್ಥೆ, ಸಂಸ್ಕೃತಿ ಸಿರಿ ಬಳಗ, ರಾಮೋತ್ಸವ, ಮುತ್ತಪ್ಪ ದೇವಾಲಯ, ಸಮಿತಿ ಕೊಡಗು ಪತ್ರಕರ್ತರ ಸಂಘ, ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಕೈಜೋಡಿಸಲಿವೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ಅವರು ಮಾತನಾಡಿ ಸಾರ್ವಜನಿಕರಿಗೆ ಅರಿವು ಮೂಡಿಸುವ ದಿಸೆಯಲ್ಲಿ ಫೆಬ್ರವರಿ, ೧೫ ರವರೆಗೆ ವಿವಿಧ ಶಾಲಾ, ಕಾಲೇಜು ಹಂತದಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಾದಕ ವಸ್ತುಗಳನ್ನು ತೆಗೆದುಕೊಂಡಲ್ಲಿ ಯಾವ ಯಾವ ಕಾಯಿಲೆಗಳು ಬರುತ್ತವೆ ಎಂಬ ಬಗ್ಗೆ ಎಚ್ಚರಿಕೆ ನೀಡಲಾಗುತ್ತದೆ. ಮಾದಕ ವಸ್ತುಗಳಿಂದ ದೂರವಿರುವಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ. ಮಾದಕ ವಸ್ತು ತೆಗೆದುಕೊಳ್ಳುವುದರಿಂದ ಅವರ ಆರೋಗ್ಯದ ಹಾಗೂ ಕುಟುಂಬದ ಮೇಲಾಗುವ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ವೈದ್ಯಕೀಯ ಅಧೀಕ್ಷಕರಾದ ಡಾ. ಸೋಮಶೇಖರ್ ಮಾತನಾಡಿ ಅಂಗಾAಗ ದಾನವನ್ನು ಸ್ವಯಂ ಪ್ರೇರಣೆಯಿಂದ ಮಾಡಲು ಮುಂದಾಗಬೇಕು. ಅಂಗಾAಗ ದಾನ ಮಾಡುವುದರಿಂದ ಮತ್ತೊಬ್ಬರ ಅಮೂಲ್ಯ ಜೀವ ಉಳಿಸಿದಂತಾಗುತ್ತದೆ ಎಂದು ಅವರು ತಿಳಿಸಿದರು.
ಜಿಲ್ಲಾ ಸರ್ಜನ್ ಡಾ. ನಂಜುAಡಯ್ಯ ಅವರು ಮಾತನಾಡಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಾಂಶುಪಾಲ ಡಾ. ವಿಶಾಲ್ ಕುಮಾರ್, ಡಾ. ಅಭಿನಂದನ್, ಡಾ. ಸುಮುಖ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಇತರರು ಇದ್ದರು.