ಮಡಿಕೇರಿ, ಫೆ. ೫: ಕರ್ನಾಟಕ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷರಾಗಿರುವ ಸಿ.ಎಸ್. ಅರುಣ್ ಮಾಚಯ್ಯ ಅವರಿಗೆ ರಾಜ್ಯ ಸಚಿವರ ಸ್ಥಾನಮಾನವನ್ನು ನೀಡಲಾಗಿದೆ.

ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಕೆಲವು ತಿಂಗಳ ಹಿಂದೆ ಅರುಣ್ ಮಾಚಯ್ಯ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿತ್ತು. ಇದೀಗ ಸ್ಥಳೀಯ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರ ಮನವಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಫಾರಸಿನಂತೆ ರಾಜ್ಯಪಾಲರ ಆದೇಶ ಅನುಸಾರವಾಗಿ ಅರುಣ್ ಮಾಚಯ್ಯ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಲಾಗಿದೆ. ಈ ಬಗ್ಗೆ ರಾಜ್ಯಪಾಲರ ಆದೇಶಾನುಸಾರ ಸರಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಬಾಣದ ರಂಗಯ್ಯ ಎನ್.ಆರ್. ಅವರು ತಾ. ೩ ರಂದು ಆದೇಶ ಹೊರಡಿಸಿದ್ದಾರೆ. ಇದು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.