ಸೋಮವಾರಪೇಟೆ, ಫೆ. ೫: ಜೀವನದಲ್ಲಿ ವಿದ್ಯಾಭ್ಯಾಸದ ಜೊತೆಗೆ ಅನುಭವದ ಶಿಕ್ಷಣ ಬಹುಮುಖ್ಯ ಎಂದು ಹೊಸತೋಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಕೆ.ಜೆ. ಸವಿತಾ ಅಭಿಪ್ರಾಯಿಸಿದರು.
ಇಲ್ಲಿನ ಓ.ಎಲ್.ವಿ. ಕಾನ್ವೆಂಟ್ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟದ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಕಲಿಕೆ ನಿರಂತರವಾಗಿರಬೇಕು. ಶಿಕ್ಷಕರು ಮತ್ತು ಪೋಷಕರ ಮಾರ್ಗದರ್ಶನ ವನ್ನು ಸಮರ್ಪಕವಾಗಿ ಪಾಲನೆ ಮಾಡಿದರೆ ಸಮಾಜದಲ್ಲಿ ಉತ್ತಮ ಸ್ಥಾನ ಮತ್ತು ಗೌರವವನ್ನು ಪಡೆಯಲು ಸಾಧ್ಯ ಎಂದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಅರುಣ ಜ್ಯೋತಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನೂರಕ್ಕೆ ನೂರು ಅಂಕ ಪಡೆಯುವವರ ಸಂಖ್ಯೆ ಹೆಚ್ಚಿದೆ. ಇಂದಿನ ವಿದ್ಯಾರ್ಥಿಗಳಿಗೆ ಅವಕಾಶಗಳು ವಿಫುಲವಾಗಿವೆ. ಹಾಗಾಗಿ ಕಲಿಕೆಯಲ್ಲಿ ವಿದ್ಯಾರ್ಥಿಗಳಿಗೆ ಛಲವಿರಬೇಕು ಎಂದರು. ವೇದಿಕೆಯಲ್ಲಿ ಶಾಲಾ ವ್ಯವಸ್ಥಾಪಕರಾದ ಸಿಸ್ಟರ್ ದಯಾ, ಕರೆಸ್ಪಾಂಡೆAಟ್ ಸಿಸ್ಟರ್ ನಿರ್ಮಲ, ಸಿಸ್ಟರ್ ಸಿಂಥಿಯಾ, ಎಆರ್‌ಎಸ್‌ಐ ಗಣಪತಿ, ಶಿವರಾಜ್, ವಿಕೇಶ್, ಸಂದರ್ಶ್ ಇದ್ದರು. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆ ಮತ್ತು ಕ್ರೀಡೆಗೆ ಸಂಬAಧಿಸಿದAತೆ ನಡೆದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.