ಮಡಿಕೇರಿ, ಫೆ. ೫: ನಗರದ ಸಮೀಪದ ಕರ್ಣಂಗೇರಿಯಲ್ಲಿರುವ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ತಾ. ೧೫ ರಂದು ಮಹಾಶಿವರಾತ್ರಿ ಅಂಗವಾಗಿ ಧಾರ್ಮಿಕ ಕಾರ್ಯ ಸೇರಿದಂತೆ ವಿವಿಧ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ ೯ ಗಂಟೆಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ೧೦ ಗಂಟೆಗೆ ದೇವಾಲಯ ಮುಖ್ಯದ್ವಾರದಿಂದ ಸ್ತಬ್ಧಚಿತ್ರ, ಪೂರ್ಣಕುಂಭ ಕಳಸ, ಚಂಡೆವಾದ್ಯ, ವೀರಗಾಸೆ, ಡೊಳ್ಳು ಕುಣಿತದೊಂದಿಗೆ ಮೆರವಣಿಗೆ, ಮಧ್ಯಾಹ್ನ ೧೨ಕ್ಕೆ ಮಹಾಮಂಗಳಾರತಿ, ಭಕ್ತಾದಿಗಳಿಂದ ಪಂಚಲಿAಗಕ್ಕೆ ಪವಿತ್ರ ಗಂಗಾಜಲ ಅಭಿಷೇಕ, ಶಿವಮೂರ್ತಿಗೆ ಪುಷ್ಪಾರ್ಚನೆ ನಡೆದು ಮಧ್ಯಾಹ್ನ ಅನ್ನಸಂತರ್ಪಣೆ. ಸಂಜೆ ೭ ಗಂಟೆಗೆ ದೀಪೋತ್ಸವ ನಡೆಯಲಿದೆ. ಈ ಸಂದರ್ಭ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು, ದೇವಾಲಯ ಧರ್ಮದರ್ಶಿ ಗೋವಿಂದ ಸ್ವಾಮಿ, ಪ್ರಧಾನ ಅರ್ಚಕ ಶ್ರೀನಿವಾಸ್ ಸ್ವಾಮಿ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.