ಮಡಿಕೇರಿ, ಫೆ. ೫; ಇಲ್ಲಿಗೆ ಸಮೀಪದ ಮಕ್ಕಂದೂರು ಗ್ರಾಮದ ಮಕ್ಕಂದೂರು ಪ್ರೀಮಿಯರ್ ಲೀಗ್ ಬಳಗದ ವತಿಯಿಂದ ಏರ್ಪಡಿಸಲಾಗಿದ್ದ ಮಕ್ಕಂದೂರು ಪ್ರೀಮಿಯರ್ ಲೀಗ್ ಪಂದ್ಯಾವಳಿ ಅಂಗವಾಗಿ ವಿವಿಧ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು.
ಸಾರ್ವಜನಿಕರಿಗಾಗಿ ಏರ್ಪಡಿಸಲಾಗಿದ್ದ ಪುರುಷರ ಹಗ್ಗಜಗ್ಗಾಟ ಹಾಗೂ ವಾಲಿಬಾಲ್ ಪಂದ್ಯಾವಳಿಯಲ್ಲಿ ಟೈಟನ್ಸ್ ಮಕ್ಕಂದೂರು ತಂಡ ಪ್ರಥಮ, ದಿ ಬಾಯ್ಸ್ ದ್ವಿತೀಯ ಬಹುಮಾನ ಪಡೆದುಕೊಂಡವು. ಮಹಿಳೆಯರ ಹಗ್ಗ ಜಗ್ಗಾಟ ಹಾಗೂ ಥ್ರೋಬಾಲ್ ಪಂದ್ಯಾವಳಿಯಲ್ಲಿ ಲೀಲಾವತಿ ಗೆಳತಿಯರ ಬಳಗ ಪ್ರಥಮ ಹಾಗೂ ಮಹಿಳಾ ಒಕ್ಕೂಟ ದ್ವಿತೀಯ ಬಹುಮಾನ ಪಡೆದುಕೊಂಡವು. ಇದೇ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಗ್ರಾಮದ ಮುಖ್ಯ ರಸ್ತೆ ಬದಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.