ನಾಪೋಕ್ಲು, ಫೆ. ೫: ಚೇರಂಬಾಣೆ, ಕಾರುಗುಂದ ಗೌಡ ಸಮಾಜ, ಚೇರಂಬಾಣೆ ಗೌಡ ಯುವ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಮೊದಲ ವರ್ಷದ ಜಿಲ್ಲಾಮಟ್ಟದ ಗೌಡ ಜನಾಂಗದ ಕೇರಂ ಕ್ರೀಡಾಕೂಟ ತಾ ೧೫ ರಂದು ಗೌಡ ಸಮಾಜ ಕಾರುಗುಂದದಲ್ಲಿ ಜರುಗಲಿದೆ.

ಚೇರಂಬಾಣೆ ಗೌಡ ಸಮಾಜ ಅಧ್ಯಕ್ಷ ಕೊಡಪಾಲು ಎಸ್. ಗಣಪತಿ ಅಧ್ಯಕ್ಷತೆಯಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಉದ್ಯಮಿ ಎಡಿಕೇರಿ ಪ್ರಸನ್ನ ಉದ್ಘಾಟಿಸಲಿದ್ದಾರೆ.

ಸಮಾರೋಪ ಸಮಾರಂಭದ ಉದ್ಘಾಟನೆಯನ್ನು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕ ಹರಪಹಳ್ಳಿ ರವೀಂದ್ರ, ಉದ್ಯಮಿ ಎಡಿಕೇರಿ ಪ್ರಸನ್ನ, ಗೌಡ ಸಮಾಜ ಉಪಾಧ್ಯಕ್ಷ ಕೇಕಡ ದಿನೇಶ್, ಕಾರ್ಯದರ್ಶಿ ಬೆಳ್ಯನ ಚಂದ್ರಶೇಖರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.