ಗೋಣಿಕೊಪ್ಪಲು, ಫೆ. ೫: ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯನ್ನು ಹೆಸರನ್ನು ವಿಬಿ ಜಿ ರಾಮ್ ಜಿ ಎಂದು ಕೇಂದ್ರ ಸರಕಾರ ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ಹಾಗೂ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೋಣಿಕೊಪ್ಪದಿಂದ ಪೊನ್ನಂಪೇಟೆಯ ಗಾಂಧಿ ಪ್ರತಿಮೆ ತನಕ ೫ ಕಿ.ಮೀ ಪಾದಯಾತ್ರೆ ಕೈಗೊಂಡು ಬಹಿರಂಗ ಸಭೆ ನಡೆಸಲಾಯಿತು.

ಪಾದಯಾತ್ರೆಗೆ ಗೋಣಿಕೊಪ್ಪಲುವಿನ ಉಮಾಮಹೇಶ್ವರಿ ದೇವಾಲಯದ ಎದುರು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಸೇರಿದಂತೆ ವೀರಾಜಪೇಟೆ, ನಾಪೋಕ್ಲು, ಮಡಿಕೇರಿ ಭಾಗದಿಂದ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

ಬಿಸಿಲನ್ನು ಲೆಕ್ಕಿಸದೆ ಕಾಂಗ್ರೆಸ್ ಪಕ್ಷದ ಸಾವಿರಾರು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಜೊತೆಯಾದರು. ರಸ್ತೆಯ ಒಂದು ಬದಿಯಲ್ಲಿ ಪಾದಯಾತ್ರೆಯು ಸಾಗಿ ಪೊನ್ನಂಪೇಟೆಯ ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆಯ ಮುಂದೆ ಸಮಾಗಮಾಗೊಂಡಿತು.

ಶಾಸಕ ಎ.ಎಸ್.ಪೊನ್ನಣ್ಣ, ಕೆಪಿಸಿಸಿ ವಕ್ತಾರ ಲಕ್ಷö್ಮಣ್, ಮಾಜಿ ಎಂಎಲ್‌ಸಿ ವೀಣಾ ಅಚ್ಚಯ್ಯ, ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ಸೇರಿದಂತೆ ಗಣ್ಯರು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಮರುಸ್ಥಾಪನೆ ತನಕ ಹೋರಾಟ : ಪೊನ್ನಣ್ಣ

ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ನರೇಗಾ ಯೋಜನೆಯನ್ನು ಕೈ ಬಿಡುವ ಮೂಲಕ ‘ಜಿ ರಾಮ್ ಜಿ’ ಹೆಸರನ್ನು ನಾಮಕರಣಗೊಳಿಸಿ, ಬಡವರನ್ನು ಬಡವರಾಗಿಯೇ ಉಳಿಸಲು ಹೊರಟಿದೆ. ಕಾಂಗ್ರೆಸ್ ಪಕ್ಷ ಕೇಳುವ ಪ್ರಶ್ನೆಗಳಿಗೆ ಕೇಂದ್ರ ಸರ್ಕಾರದ ಬಳಿ ಉತ್ತರವಿಲ್ಲ. ಕೇವಲ ಭಾವನಾತ್ಮಕ ಹಾಗೂ ದ್ವೇಷ ಭಾವನೆಯಿಂದ ಭಾರತ ದೇಶವನ್ನು ಅಭಿವೃದ್ದಿ ಮಾಡಲು ಸಾಧ್ಯವಿಲ್ಲ. ನರೇಗಾ ಯೋಜನೆಯನ್ನು ಮರುಸ್ಥಾಪನೆ ಮಾಡುವರೆಗೂ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮುಂದುವರೆಯಲಿದೆ. ಕರ್ನಾಟಕ ರಾಜ್ಯ ಸೇರಿದಂತೆ ಬಿಜೆಪಿಯೇತರ ಸರಕಾರವಿರುವ ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಜಿ ರಾಮ್ ಜಿ’ ಯೋಜನೆಯನ್ನು ಅನುಷ್ಠಾನಗೊಳಿಸಲು ವಿರೋಧ ವ್ಯಕ್ತಪಡಿಸಿವೆ ಎಂದರು.

ಕೇಂದ್ರ ಸರ್ಕಾರವು ತಂದಿರುವ ಹೊಸ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಕಾಯಿದೆಯಲ್ಲಿ ಶೇ.೪೦ರಷ್ಟು ರಾಜ್ಯ ಸರ್ಕಾರದ ಅನುದಾನವನ್ನು ಆರಂಭದಲ್ಲಿಯೇ ಕೇಂದ್ರಕ್ಕೆ ನೀಡಬೇಕು. ಕೇಂದ್ರ ಸರ್ಕಾರ ಸೂಚಿಸುವ ಕಾಮಗಾರಿಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಸಬೇಕು ಇದರಿಂದ ಅಭಿವೃದ್ಧಿ ನಿರೀಕ್ಷೆ ಮಾಡಲು ಸಾಧ್ಯವೆ? ಬಡವರನ್ನು ಶೋಷಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಂತಹ ಕಾಯಿದೆಯನ್ನು ಜಾರಿಗೆ ತಂದಿದೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕೇಂದ್ರ ಸರ್ಕಾರ ತಂದಿರುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅವಕಾಶ ನೀಡುವುದಿಲ್ಲ. ಮುಂದಿನ ದಿನಗಳಲ್ಲಿ ಗ್ರಾಮ ಮಟ್ಟದಲ್ಲಿಯೂ ಹೋರಾಟ ಹಮ್ಮಿಕೊಳ್ಳಲಾಗುತ್ತದೆ. ಪಕ್ಷದ ಕಾರ್ಯಕರ್ತರು ಈ ನಿಟ್ಟಿನಲ್ಲಿ ಹೋರಾಟಕ್ಕೆ ಕಾರ್ಯಪ್ರವೃತ್ತರಾಗುವಂತೆ ಕರೆ ನೀಡಿದರು.

ಹೆಸರು ಬದಲಾವಣೆ ಖಂಡನೀಯ : ಧರ್ಮಜ

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷವು ನೀಡಿದ ಕರೆಗೆ ಜಿಲ್ಲೆಯ ಮೂಲೆ ಮೂಲೆಗಳಿಂದಲೂ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದಾರೆ. ಕೇಂದ್ರ ಸರ್ಕಾರ ಹೆಸರು ಬದಲಾಯಿಸಿ ಯೋಜನೆಯನ್ನು ಅನುಷ್ಠಾನಕ್ಕೆ ಮುಂದಾಗಿರುವುದು ಖಂಡನೀಯ. ಬಡವರ ಹಾಗೂ ಅತೀ ಸಣ್ಣ ರೈತರ ಹಿತಕ್ಕಾಗಿ ಈ ಹಿಂದೆ ಮನ್‌ಮೋಹನ್ ಸಿಂಗ್ ಪ್ರಧಾನಮಂತ್ರಿಯಾಗಿದ್ದ ಸಂದರ್ಭ ಜಾರಿಗೆ ತಂಡ ರಾಷ್ಟಿçÃಯ ಉದ್ಯೋಗಖಾತ್ರಿ ಯೋಜನೆ ದೇಶದ ಕೋಟ್ಯಂತರ ಕಾರ್ಮಿಕರಿಗೆ ಸಹಕಾರಿಯಾಗಿತ್ತು. ನರೇಗಾದ ಮಹತ್ವಕಾಂಕ್ಷಿ ಯೋಜನೆಗೆ ಮಹಾತ್ಮ ಗಾಂಧಿಜಿಯವರ ಹೆಸರನ್ನು ನಾಮಕರಣ ಮಾಡಲಾಗಿತ್ತು. ಇದೀಗ ಈ ಯೋಜನೆಯಿಂದ ಮಹಾತ್ಮ ಗಾಂಧಿಜಿಯವರ ಹೆಸರನ್ನು ಬಿಜೆಪಿ ಪಕ್ಷದ ಕೇಂದ್ರ ಸರ್ಕಾರವು ಕೈ ಬಿಡುವ ಮೂಲಕ ‘ಜಿ ರಾಮ್ ಜಿ’ ಹೆಸರನ್ನು ನಾಮಕರಣಗೊಳಿಸಿರುವುದು ಸರಿಯಲ್ಲ ಎಂದು ಕಿಡಿಕಾರಿದರು.

ಸಭೆಯನ್ನು ಉದ್ದೆಶಿಸಿ ಕೆಪಿಸಿಸಿ ವಕ್ತಾರರಾದ ಲಕ್ಷö್ಮಣ್, ಬ್ರಿಜೇಶ್, ಮತ್ತಿತರರು ಮಾತನಾಡಿದರು.

ಪಾದಯಾತ್ರೆಯಲ್ಲಿ ಕರ್ನಾಟಕ ರಾಜ್ಯ ಕ್ರೀಡಾಪ್ರಾಧಿಕಾರದ ಉಪಾಧ್ಯಕ್ಷ, ಮಾಜಿ ಎಂಎಲ್‌ಸಿ ಚೆಪ್ಪುಡಿರ ಅರುಣ್ ಮಾಚಯ್ಯ, ಕೆಪಿಸಿಸಿ ಕಾರ್ಯದರ್ಶಿ ಕೆ.ಪಿ. ಚಂದ್ರಕಲಾ, ಕೊಕ್ಕಂಡ ರೂಪ ಭೀಮಯ್ಯ, ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷÀ ಕೊಲ್ಲಿರ ಬೋಪಣ್ಣ, ಮಾಯಮುಡಿ ಗ್ರಾ.ಪಂ. ಅಧ್ಯಕ್ಷ ಆಪಟ್ಟಿರ ಟಾಟು ಮೊಣ್ಣಪ್ಪ, ಗೋಣಿಕೊಪ್ಪ ಗ್ರಾ.ಪಂ. ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಿರ ಹರೀಶ್, ಉಪಾಧ್ಯಕ್ಷ ಆಲಿರ ರಶೀದ್, ಪ್ರಮುಖರಾದ ಬಿ.ಎನ್. ಪೃಥ್ವಿ, ತಾರ ಅಯ್ಯಮ್ಮ, ಕಾಳಿಮಾಡ ಪ್ರಶಾಂತ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತ, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿಪೂಣಚ್ಚ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ವಕ್ತಾರ ತೆನ್ನಿರ ಮೈನಾ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ವೀರಾಜಪೇಟೆ ಡಿವೈಎಸ್ಪಿ ಮಹೇಶ್ ಕುಮಾರ್ ನೇತೃತ್ವದಲ್ಲಿ ಗೋಣಿಕೊಪ್ಪ ಸಿಪಿಐ ಶಿವರಾಜ್ ಮುದೋಳ್ ಸೂಕ್ತ ಬಂದೋಬಸ್ತ್ ಕಾರ್ಯ ಕೈಗೊಂಡಿದ್ದರು.