ವೀರಾಜಪೇಟೆ, ಫೆ. ೫: ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ವೀರಾಜಪೇಟೆ ನಗರ ಠಾಣೆ ಅಪರಾಧ ವಿಭಾಗದ ಪೊಲೀಸರು ೯ ಪ್ರಕರಣ ದಾಖಲಿಸಿ ದಂಡ ವಿಧಿಸಿ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ವೀರಾಜಪೇಟೆ ನಗರ ಠಾಣೆ ಅಪರಾಧ ವಿಭಾಗದ ಉಪನಿರೀಕ್ಷಕ ಟಿ.ಎಂ.ಕಾವೇರಪ್ಪ ಹಾಗೂ ಸಿಬ್ಬಂದಿಗಳು ಸಂಜೆ ಹೊತ್ತಲ್ಲಿ ನಗರದ ಮುಖ್ಯ ರಸ್ತೆಯಲ್ಲಿ ವಾಹನ ಮತ್ತು ಚಾಲಕರನ್ನು ತಪಾಸಣೆ ನಡೆಸಿದ ಸಂದರ್ಭ ಮದ್ಯ ಸೇವನೆ ಮಾಡಿ ವಾಹನ ಚಾಲನೆಯಲ್ಲಿ ತೊಡಗಿದ್ದ ೯ ವಾಹನಗಳ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ ರೂ, ೯೦ ಸಾವಿರ ದಂಡ ವಿಧಿಸಿ ನ್ಯಾಯಾಲಯದ ತೀರ್ಪು ಬರುವವರೆಗೂ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.