ನಾಪೋಕ್ಲು, ಫೆ. ೫: ಇಲ್ಲಿಗೆ ಸಮೀಪದ ಕಕ್ಕಬ್ಬೆ ಕೇಂದ್ರ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಾಕಿ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಗೋಣಿಕೊಪ್ಪದಲ್ಲಿ ನಡೆದ ಲಯನ್ಸ್ ಸಂಸ್ಥೆಯು ಆಯೋಜಿಸಿದ ೬ (ಎ) ಸೈಡ್ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಕೇಂದ್ರ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡು ದ್ವಿತೀಯ ಸ್ಥಾನವನ್ನು ಪಡೆದು ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯವರು ಹಾಗೂ ಶಿಕ್ಷಕ ವೃಂದದವರು ಮಾರ್ಗದರ್ಶನ ನೀಡಿದ್ದರು.