ಶನಿವಾರಸಂತೆ, ಫೆ. ೬: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ತಾಲೂಕು ಕಸಾಪ, ಕೊಡ್ಲಿಪೇಟೆ ಹೋಬಳಿ ಕಸಾಪ ಹಾಗೂ ಬೆಸೂರು ಸರ್ಕಾರಿ ಪ್ರೌಢಶಾಲೆ ಸಂಯುಕ್ತಾ ಶ್ರಯದಲ್ಲಿ ದಿ. ಸಂಪಾಜೆ ಸಣ್ಣಯ್ಯ ಪಟೇಲ್ ದತ್ತಿ ಮತ್ತು ದಿ. ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ ತಾ. ೭ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಕಸಾಪ ಕೊಡ್ಲಿಪೇಟೆ ಹೋಬಳಿ ಅಧ್ಯಕ್ಷ ಬಿ.ಪಿ. ಶಾಂತಮಲ್ಲಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಶ್ರೀ ಬಾಲ ತ್ರಿಪುರ ಸುಂದರಿ ದೇವಾಲಯ ಸಮಿತಿ ಅಧ್ಯಕ್ಷ ಎನ್.ವೈ. ಧರ್ಮಪ್ಪ ಉದ್ಘಾಟಿಸುವರು. ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹಮ್ಮದ್ ಅವರು “ಗ್ರಾಮೀಣ ಜಾನಪದ ಸೊಗಡು’’ ವಿಷಯದ ಬಗ್ಗೆ ಹಾಗೂ ಸಾಹಿತಿ ಲಾವಣ್ಯ ಮೋಹನ್ ಅವರು “ಕನ್ನಡ ಸಾಹಿತ್ಯದ ಬೆಳವಣಿಗೆ’’ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಪ್ರೌಢಶಾಲಾ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಎಸ್.ಎಸ್. ಮಂಜುಳಾ, ಮುಖ್ಯ ಶಿಕ್ಷಕ ಬಿ.ಎಸ್. ದೇವರಾಜ್, ನ್ಯಾಯದಳ್ಳ ಪ್ರೌಢಶಾಲಾ ಮುಖ್ಯಶಿಕ್ಷಕಿ ಜಿ.ಈ. ಮಂಜುಳಾಮಣಿ, ದೇವಾಲಯ ಸಮಿತಿ ಕಾರ್ಯದರ್ಶಿ ದೇವೇಗೌಡ, ತಾಲೂಕು ಕಸಾಪ ಅಧ್ಯಕ್ಷ ಎಸ್.ಡಿ. ವಿಜೇತ್, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್, ತಾಲೂಕು ಕಸಾಪ ಗೌರವ ಕಾರ್ಯದರ್ಶಿಗಳಾದ ಎ.ಪಿ. ವೀರರಾಜು, ಜ್ಯೋತಿ ಅರುಣ್, ಖಜಾಂಚಿ ಕೆ.ಪಿ. ದಿನೇಶ್, ಹೋಬಳಿ ಕಸಾಪ ಗೌರವ ಕಾರ್ಯದರ್ಶಿಗಳಾದ ಶಾಂತಕುಮಾರ್, ಜಿ.ಪಿ. ಕವಿತಾ, ಖಜಾಂಚಿ ಡಾ. ಉದಯಕುಮಾರ್ ಪಾಲ್ಗೊಳ್ಳಲಿದ್ದಾರೆ.

* ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ತಾಲೂಕು ಕಸಾಪ, ಕೊಡ್ಲಿಪೇಟೆ ಹೋಬಳಿ ಕಸಾಪ ಹಾಗೂ ಕೊಡ್ಲಿಪೇಟೆ ಕಿರಿಕೊಡ್ಲಿ ಮಠ ಶ್ರೀಸದಾಶಿವ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ಸಂಯುಕ್ತ ಆಶ್ರಯದಲ್ಲಿ ದಾವಣಗೆರೆ ಸುನಂದಾದೇವಿ-ಸAಗಮೇಶ್ವರ ಗೌಡ ಅವರ ದತ್ತಿ ಪ್ರಾಯೋಜಕತ್ವದಲ್ಲಿ ಆರೋಡ ದಾಸೋಹಿ ಧರ್ಮ ಚಿಂತಾಮಣಿ ಮಹಾಶರಣ ಲಿಂಗೈಕ್ಯ ಮಾಗನೂರು ಬಸಪ್ಪ ದತ್ತಿ ಪ್ರಯುಕ್ತ ‘ಶರಣ ಸಾಹಿತ್ಯ ಮತ್ತು ಸಂಸ್ಕೃತಿ’ ದತ್ತಿ ಕಾರ್ಯಕ್ರಮ ಮಧ್ಯಾಹ್ನ ೨ ಗಂಟೆಗೆ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಕಸಾಪ ಕೊಡ್ಲಿಪೇಟೆ ಹೋಬಳಿ ಘಟಕದ ಅಧ್ಯಕ್ಷ ಬಿ.ಪಿ. ಶಾಂತಮಲ್ಲಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕಾರ್ಯದರ್ಶಿ ಎಸ್.ಐ. ಮುನೀರ್ ಅಹಮ್ಮದ್ ಉದ್ಘಾಟಿಸುವರು. ಶನಿವಾರಸಂತೆ ವಿಘ್ನೇಶ್ವರ ಪ್ರಾಢಶಾಲಾ ಶಿಕ್ಷಕ ಕೆ.ಪಿ. ಜಯಕುಮಾರ್ ದತ್ತಿ ಉಪನ್ಯಾಸ ನೀಡಲಿದ್ದಾರೆ. ಸಾನಿಧ್ಯ ವಹಿಸುವ ಕಿರಿಕೊಡ್ಲಿ ಮಠಾಧೀಶ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಗೌರವಾಧ್ಯಕ್ಷ ಸದಾಶಿವ ಸ್ವಾಮೀಜಿ ಅವರು ಆಶೀರ್ವಚನ ನೀಡಿ ಶರಣ ಸಂಸ್ಕೃತಿ ಪ್ರಚಾರಕ ಸನ್ಮಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಗನೂರು ಬಸಪ್ಪ ಟ್ರಸ್ಟ್ನ ಗೌರವ ಕಾರ್ಯದರ್ಶಿ ಎಂ.ಬಿ. ಸಂಗಮೇಶ್ವರ ಗೌಡ, ವಿದ್ಯಾಸಂಸ್ಥೆ ಕಾರ್ಯದರ್ಶಿ ಕೆ.ಪಿ. ನಂಜುAಡಯ್ಯ, ಕಸಾಪ ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್, ಗೌರವ ಕಾರ್ಯದರ್ಶಿಗಳಾದ ವೀರರಾಜು, ಜ್ಯೋತಿ ಅರುಣ್, ಕೆ.ಪಿ. ದಿನೇಶ್, ಪ್ರಮುಖರಾದ ಹೆಚ್.ಜೆ. ಪ್ರವೀಣ್, ಬಿ.ಕೆ. ಯತೀಶ್, ಡಾ. ಉದಯಕುಮಾರ್, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್ ಪಾಲ್ಗೊಳ್ಳಲಿದ್ದಾರೆ.