ಮಡಿಕೇರಿ, ಫೆ. ೬: ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಡಿಕೇರಿ ಕಚೇರಿಯಲ್ಲಿ ಹೊಸದಾಗಿ ಸೃಜಿಸಿರುವ ರಕ್ಷಣಾಧಿಕಾರಿ (ಅಸಾಂಸ್ಥಿಕ) ಹುದ್ದೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ಸೋಶಿಯಲ್ ವರ್ಕ್, ಸೋಶಿಯಾಲಾಜಿ ಮನಃಶಾಸ್ತç, ಸಮುದಾಯ ಅಭಿವೃದ್ಧಿ ಮಹಿಳಾ ಅಧ್ಯಯನ, ಗೃಹ ವಿಜ್ಞಾನ ಇವುಗಳಲ್ಲಿ ಯಾವುದಾದರೊಂದರಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಇರಬೇಕು. ಮಕ್ಕಳ ಕ್ಷೇತ್ರದಲ್ಲಿ ಕನಿಷ್ಟ ೨ ವರ್ಷ ಅನುಭವದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಗೌರವ ಧನ ರೂ. ೨೭,೮೦೪ ಆಗಿರುತ್ತದೆ. ಇಚ್ಛೆಯುಳ್ಳ ಅಭ್ಯರ್ಥಿಗಳು ತಮ್ಮ ಸ್ವ ವಿವರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರಗಳ ನಕಲುಗಳೊಂದಿಗೆ ಅರ್ಜಿಯನ್ನು ತಾ. ೧೩ ರೊಳಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಂತಿ ನಿಲಯ, ಕಾನ್ವೆಂಟ್ ಜಂಕ್ಷನ್, ಮಡಿಕೇರಿ, ಕೊಡಗು ಜಿಲ್ಲೆ (ದೂ.ಸಂ.೦೮೨೭೨-೨೨೮೮೦೦) ಈ ವಿಳಾಸಕ್ಕೆ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕೋರಿದ್ದಾರೆ.